Advertisement

Belagavi: ಪ್ರವಾಹಕ್ಕೆ 44 ಸೇತುವೆ ಮುಳುಗಡೆ; ಬೆಳಗಾವಿ-ಮಿರಜ ನಡುವೆ ವಿಶೇಷ ರೈಲು

09:38 PM Jul 30, 2024 | Team Udayavani |

ಬೆಳಗಾವಿ: ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾ ನದಿಯಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಪರಿಣಾಮವಾಗಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ.

Advertisement

ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿಯಿಂದ ಮಿರಜವರಗೆ ಪ್ಯಾಸೆಂಜರ್ ವಿಶೇಷ ರೈಲು ಪ್ರಾರಂಭಿಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಈ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಗಸ್ಟ್ 1 ರಿಂದ 4 ದಿನಗಳವರೆಗೆ ಪ್ಯಾಸೆಂಜರ್ ವಿಶೇಷ ರೈಲು ಬಿಡಲು ಆದೇಶಿಸಿದ್ದಾರೆ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ.

ಬೆಳಗಾವಿ-ಮಿರಜ ರೈಲು ಅ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 9ಕ್ಕೆ ಮಿರಜ ನಿಲ್ದಾಣ ತಲುಪಲಿದೆ.

ಮಿರಜ-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50 ಕ್ಕೆ ಮಿರಜನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.

Advertisement

ಬೆಳಗಾವಿ-ಮಿರಜ ರೈಲು  (07303) ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮಿರಜ ತಲುಪಲಿದೆ.

ಮಿರಜ-ಬೆಳಗಾವಿ ರೈಲು ಸಂಖ್ಯೆ (07304)  ಸಂಜೆ 05.35 ಕ್ಕೆ ಮಿರಜನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ ಎಂದು ಕಡಾಡಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next