Advertisement

Belagavi; ಪರಿಷತ್ ಮಾಜಿ ಸದಸ್ಯೆ ಸುನಂದಾತಾಯಿ ಪಾಟೀಲ್ ಲಿಂಗನಗೌಡ ನಿಧನ

01:21 PM Apr 14, 2024 | Team Udayavani |

ಬೆಳಗಾವಿ: ವಿಧಾನ ಪರಿಷತ್ ಮಾಜಿ ಸದಸ್ಯೆ ಸುನಂದಾತಾಯಿ ಲಿಂಗನಗೌಡ ಪಾಟೀಲ (72) ಅವರು ವಯೋಸಹಜ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.

Advertisement

ಮೂಲತಃ ಹಿರೇ ಬಾಗೇವಾಡಿ ಗ್ರಾಮದವರಾದ ಅವರು ಒಂದು ಬಾರಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಸಂಸ್ಕಾರವನ್ನು ಇಂದು ಸಂಜೆ ಹಿರೇ ಬಾಗೇವಾಡಿ ಗ್ರಾಮದಲ್ಲಿ ನೆರವೇರಿಸಲಾಗುವುದು. ಮೃತರಿಗೆ ಪುತ್ರಿ, ಇಬ್ಬರು ಪುತ್ರರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next