Advertisement

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

02:45 PM Dec 23, 2024 | Team Udayavani |

ಬೆಳಗಾವಿ: ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ. ಇಂಥ ನೂರು ಸಿ.ಟಿ. ರವಿ ಬಂದರೂ ಹೆದರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

Advertisement

ನಗರದಲ್ಲಿ ಸೋಮವಾರ (ಡಿ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು.

ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವೀಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿಯವರಿಗೆ ದೂರು ಕೊಡುತ್ತೇನೆ.‌ ಸಿ.ಟಿ.ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್.ಎಸ್.ಎಲ್ ವರದಿ ಬೇಗ ಬಹಿರಂಗವಾಗಬೇಕು ಎಂದರು.

ಇಂಥಹ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ   ಸಿ.ಟಿ.ರವಿ ಅವರಿಗೆ ಗಾಯ ಏನಾಗಿದೆ? ಎಷ್ಟಾಗಿದೆ ಗಾಯ? ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು ಎನ್ನುವವರಿಗೆ ನಾಚಿಕೆಯಾಗಲ್ವ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ. ಸಾಧ್ಯವಾದರೆ ಭೇಟಿಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಿ.ಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದರು. ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌

Advertisement
Advertisement

Udayavani is now on Telegram. Click here to join our channel and stay updated with the latest news.

Next