ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ಸಮಯದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ಮುಖಂಡ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಂದಿನ ತಿಂಗಳು ದಿನಾಂಕ 2ರಂದು ಕಾಂಗ್ರೆಸ್ ಸೇರುವುದಾಗಿ ಹೇಳಿದರು.
ಇದನ್ನೂ ಓದಿ:ಬೆಳಗಾವಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ
ನಾನು ನಾಲ್ಕು ಭಾರಿ ವಿಧಾನಸಭೆಗೆ ಸ್ಪರ್ಧೆ ಮಾಡಿದ್ದೇನೆ. ಗೋಕಾಕ ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಉದ್ದೇಶದಿಂದ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ ಎಂದರು.
ಕಾಂಗ್ರೆಸ್ ಸೇರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರು ಅಹ್ವಾನ ಕೊಟ್ಟಿದ್ದಾರೆ. ಈ ಸಂಬಂಧ ನಮ್ಮ ಕಾರ್ಯಕರ್ತರ ಜೊತೆ ಮಾತನಾಡಿದ್ದೆನೆ. ಅವರೆಲ್ಲರ ಸಲಹೆಯಂತೆ ಈಗ ಕಾಂಗ್ರೆಸ್ ಸೇರಲಿದ್ದೇನೆ ಎಂದು ಹೇಳಿದರು.