Advertisement

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

11:46 AM Apr 19, 2024 | Team Udayavani |

ಬೆಳಗಾವಿ: ರಾಜ್ಯದಲ್ಲಿ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ ಎಂದು ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದರು.

Advertisement

ಕಾಂಗ್ರೆಸ್ ಸರ್ಕಾರದ ಅತೀವ ಓಲೈಕೆಯಿಂದ ರಾಜ್ಯದಲ್ಲಿ ಜಿಹಾದಿ ಕೃತ್ಯಗಳು ನಡೆಯುತ್ತಿದ್ದು, ಇದು ಜನರಲ್ಲಿ ಆತಂಕವನ್ನು ಉಂಟುಮಾಡಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೇಳಿದರು.

ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಅವರ ಕೊಲೆ ಅತ್ಯಂತ ಖಂಡನೀಯ. ಈ ರೀತಿ ಘಟನೆಗಳು ನಡೆಯದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಕ್ರಮ ಕೈಗೊಳ್ಳಬೇಕು.‌ ಇದರ ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next