Advertisement
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಲಕ್ಷ ಕಂಠ ಕನ್ನಡ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಗೀತಗಾಯನವನ್ನು ಪ್ರಸ್ತುತಪಡಿಸಿದರು.
Related Articles
Advertisement
ಆಡಳಿತ, ಪತ್ರವ್ಯವಹಾರ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಕನ್ನಡವನ್ನೇ ಬಳಸುವುದರ ಜತೆಗೆ ಕನ್ನಡ ನಾಡಿನಲ್ಲಿ ವಾಸಿಸುವ ಕನ್ನಡೇತರ ಭಾಷಿಕರಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವುದಾಗಿ ಎಲ್ಲರೂ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಇದೇ ವೇಳೆ ಮಾತನಾಡಿದ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರು, ”ಕನ್ನಡದ ಶ್ರೇಷ್ಠತೆಯನ್ನು ಸಾರುವುದು ಈ ಅಭಿಯಾನದ ವಿಶೇಷತೆಯಾಗಿದೆ. ಕನ್ನಡ ಗೀತಗಾಯನ ಅದ್ಭುತ ಕಾರ್ಯಕ್ರಮವಾಗಿದ್ದು, ಮಕ್ಕಳು ಸೇರಿದಂತೆ ಎಲ್ಲರೂ ಕೂಡ ಕನ್ನಡಪ್ರೇಮ ಮೆರೆಯಲು ಈ ಅಭಿಯಾನ ಉತ್ತಮ ಅವಕಾಶವಾಗಿದೆ” ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಸವರಾಜ ಹೂಗಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಬಿ.ಪುಂಡಲೀಕ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು, ಸ್ವಾಗತಿಸಿದರು.ವಿವಿಧ ಇಲಾಖೆಯ ಅಧಿಕಾರಿಗಳು,ಜಿಲ್ಲಾ ಕನ್ನಡ ಜಾಗೃತ ಸಮಿತಿಯ ಸದಸ್ಯರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಂಗೀತ ಶಿಕ್ಷಕರಾದ ವಿನಾಯಕ ಮೋರೆ ಅವರ ನೇತೃತ್ವದಲ್ಲಿ ಬೆಳಗಾವಿಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಗೀತಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.