Advertisement

ಬೆಳಗಾವಿ –ಕಿತ್ತೂರು –ಧಾರವಾಡ ರೈಲು ಮಾರ್ಗಕ್ಕೆ ಗ್ರೀನ್ ಸಿಗ್ನಲ್

06:49 PM Sep 07, 2020 | sudhir |

ಬೆಳಗಾವಿ: ಬಹುದಿನಗಳ ಕನಸಾಗಿದ್ದ ಬೆಳಗಾವಿಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

Advertisement

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಮಗಾರಿಯ ನೀಲನಕ್ಷೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, 927.40 ಕೋಟಿ ರೂ. ವೆಚ್ಚದ ಈ ಕಾಮಗಾರಿ ಶೀಘ್ರ‍್ರದಲ್ಲಿ ಆರಂಭವಾಗಲಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಜನತೆಗೆ ಇದು ಬಹಳ ಅನುಕೂಲಕರವಾಗಲಿದೆ ಎಂದು ಹೇಳಿದರು.

ಈ ನೂತನ ರೈಲು ಮಾರ್ಗದಲ್ಲಿ 11 ನಿಲ್ದಾಣಗಳು ಬರಲಿವೆ. ಬೆಳಗಾವಿ, ದೇಸೂರು, ಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹೂಲಿಕಟ್ಟಿ, ಕಿತ್ತೂರು, ತೇಗೂರು, ಮುಮ್ಮಿಗಟ್ಟಿ, ಕ್ಯಾರಕೊಪ್ಪ ಹಾಗೂ ಧಾರವಾಡ. ಕಡಿಮೆ ಅವಧಿಯಲ್ಲಿ ಧಾರವಾಡಕ್ಕೆ ತಲುಪಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಬೆಳಗಾವಿ, ಧಾರವಾಡ ಜನತೆಯ ಪರವಾಗಿ ವಿಶೇಷ ಧನ್ಯವಾದ ತಿಳಿಸುವುದಾಗಿ ಹೇಳಿದರು.

73 ಕಿ.ಮೀ. ಅಂತರದ ಈ ನೂತನ ರೈಲು ಮಾರ್ಗ ನಿರ್ಮಾಣ ಕುರಿತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 2019-20ರ ಬಜೆಟ್‌ನಲ್ಲಿ ಹೇಳಿತ್ತು. 2019ರಲ್ಲಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಸರ್ಕಾರ ಈಗ ಅನುಮೋದನೆ ನೀಡಿ ಬೆಳಗಾವಿ-ಧಾರವಾಡ ರೈಲು ಮಾರ್ಗಕ್ಕೆ ಹಸಿರು ನಿಶಾನೆ ತೋರಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ತಲಾ ಶೇ. ೫೦ರಷ್ಟು ಪಾಲು ನೀಡಲಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next