Advertisement

ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಇಬ್ಬರು ಅಭ್ಯರ್ಥಿಗಳು

05:06 PM Mar 23, 2021 | Team Udayavani |

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಂಗಳವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ‌.

Advertisement

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವೆಂಕಟೇಶ್ವರ ಮಹಾಸ್ವಾಮೀಜಿ ನಾಮಪತ್ರ ಸಲ್ಲಿಸಿದರು. ಅಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಡಸಲಗಿ ಅವರು ನಾಮಪತ್ರವನ್ನು ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಾಮಪತ್ರಗಳನ್ನು ಸ್ವೀಕರಿಸಿದರು.

ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಏ.17 ಮತದಾನ ನಡೆಯಲಿದ್ದು, ಮೇ.2ಕ್ಕೆ ಫಲಿತಾಂಶ ಪ್ರಕಟವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next