Advertisement

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

11:01 AM Nov 16, 2024 | Team Udayavani |

ಬೆಳಗಾವಿ: ವಿವಾಹಿತ ಮಹಿಳೆ ಹಾಗೂ ಆಕೆಯ ತಾಯಿಯ ಸೀರೆ ಬಿಚ್ಚಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಗರದ ವಡ್ಡರವಾಡಿಯಲ್ಲಿ ಇತ್ತೀಚೆಗೆ ನಡೆದಿದೆ.

Advertisement

ಗಂಡನ ಮನೆಯಲ್ಲಿ ಸರಿಯಾಗಿ ನೋಡಿಕೊಳ್ಳದ ಕಾರಣದಿಂದ ವಡ್ಡರವಾಡಿಯ ತಾಯಿ ಮನೆಯಲ್ಲಿ ವಾಸವಿರುವ ವಿವಾಹಿತ ಮಹಿಳೆ ಮೇಲೆ ಪಕ್ಕದ ಮನೆಯವರು ಬಂದು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹಲ್ಲೆಗೊಳಗಾದ ಮಹಿಳೆ ನಾಲ್ವರ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆಯನ್ನು ಮಹಾರಾಷ್ಟ್ರದ ಯುವಕನೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಈ ಮಹಿಳೆಗೆ ಎರಡು ಮಕ್ಕಳಿದ್ದು, ಗಂಡನ ಮನೆಯಲ್ಲಿ ಕಿರುಕುಳವಿದ್ದ ಕಾರಣ ವಡ್ಡರವಾಡಿಯ ತಾಯಿಯ ಮನೆಯಲ್ಲಿ ವಾಸವಾಗಿದ್ದರು.

ಪಕ್ಕದ‌ ಮನೆಯವರು ಬಂದು ಅವಾಚ್ಯ ಶಬ್ದದಿಂದ ನಿಂದಿಸುವುದಲ್ಲದೆ ಹಲ್ಲೆ ಮಾಡಿದ್ದಾರೆ. ಇಲ್ಲದ ಆರೋಪ ಮಾಡಿದ್ದಾರೆ. ಕಳೆದ ಸೋಮವಾರ (ನ.11) ಸಂಜೆ ನಮ್ಮ ಮನೆಗೆ ಬಂದು ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next