Advertisement

Belagavi; ಗ್ರಾಮೀಣ ಭಾಗದಲ್ಲಿ ಬಸ್ ಕೊರತೆ ತಗ್ಗಿಸಲು ಕ್ರಮ: ರಾಮಲಿಂಗಾ ರೆಡ್ಡಿ

04:02 PM Feb 18, 2024 | Team Udayavani |

ಬೆಳಗಾವಿ: ರಾಜ್ಯದಲ್ಲಿ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭವಾಗಿದ್ದು ಗ್ರಾಮೀಣ ಭಾಗದಲ್ಲಿ ಬಸ್ ಕೊರತೆ ತಗ್ಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Advertisement

ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಭಾನುವಾರ  ನಡೆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ, ಅಪಘಾತರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಹಾಗೂ ಹಾರೂಗೇರಿ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ ಎಂದರು.

ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಹೇಳಿದರು.

ಅಪಘಾತಗಳಲ್ಲಿ ಮೃತರಾದ ಬಸ್ ಚಾಲಕರಿಗೆ, ಕಂಡಕ್ಟರ್ ಗಳ ವಾರಸುದಾರರಿಗೆ 50 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಈ ಪರಿಹಾರ ಧನವನ್ನು 1 ಕೋಟಿಗೆ ಹೆಚ್ಚಿಸುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಇದಕ್ಕೂ ಮುನ್ನ ನೂತನವಾಗಿ 50 ಬಸ್ ಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ ಸಚಿವರು, ಅಪಘಾತ ರಹಿತ 5 ವರ್ಷಗಳ ವಾಹನ ಚಾಲನೆ ಮಾಡಿದ 38 ಬಸ್ ಚಾಲಕರಿಗೆ ಬೆಳ್ಳಿ ಪದಕ, ಪ್ರಶಸ್ತಿ ಪತ್ರ ನೀಡಿ, ಸನ್ಮಾನಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next