Advertisement

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

05:16 PM Sep 29, 2023 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಮೋಡ ಬಿತ್ತನೆಗೆ ಮುಂದಾಗಿದ್ದು, ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಿದರು.

Advertisement

ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಅನುಮತಿ ನೀಡಿದ್ದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ.ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ.

ಬಿತ್ತನೆ ಹೇಗೆ?
ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ ಐದು ನಿಮಿಷಗಳಲ್ಲಿ ಮಳೆ ಬರಬಹುದು.ಬೆಳಗಾವಿಯಲ್ಲಿ ಮೋಡಗಳು ಕಂಡುಬಂದಿರುವುದರಿಂದ ಮೋಡ ಬಿತ್ತನೆಗೆ ಪೂರಕ ವಾತಾವರಣವಿದೆ. 5 ರಿಂದ 10 ಸಾವಿರ ಅಡಿಗಳ ಮೇಲೆ ಮೋಡಗಳನ್ನು ಆಕರ್ಷಿಸಲು ಸಿಲ್ವರ್ ಐಯೋಡೈಡ್ ರಾಸಾಯನಿಕವನ್ನು ಆಗಸದಲ್ಲಿ ಸಿಂಪಡಣೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ವಿವರಿಸಿದರು.

ಶಾಸಕ ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ರಾಹುಲ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next