Advertisement

ಚುನಾವಣಾ ಶಾಖೆಯ ಶಿರಸ್ತೇದಾರರಾಗಿದ್ದ ನಾಗನೂರಿ ಕೋವಿಡ್ ಗೆ ಬಲಿ

12:07 PM May 15, 2021 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆ ವೇಳೆ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರರಾಗಿದ್ದ ವಿಜಯಶ್ರೀ ನಾಗನೂರಿ ಅವರು ಕೋವಿಡ್ ಸೋಂಕಿನಿಂದ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Advertisement

ಲೋಕಸಭೆ ಉಪಚುನಾವಣೆ ವೇಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವಿಜಯಶ್ರೀ ನಾಗನೂರಿ ಅವರಿಗೆ ಕೆಲ ದಿನಗಳ ಹಿಂದೆ ಸೋಂಕು ದೃಢಪಟ್ಟಿತ್ತು.‌

ನಗರದ ಯಮನಾಪುರ ನಿವಾಸಿ ಆಗಿದ್ದ ನಾಗನೂರಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದಲ್ಲಿ ಶಿರಸ್ತೇದಾರ ಆಗಿದ್ದರು. ಚುನಾವಣೆ ಫಲಿತಾಂಶ ಬಂದ ಬಳಿಕ ಮೇ 3ರಂದು ವಿಜಯಶ್ರೀ ನಾಗನೂರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.

ಇವರ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಚುನಾವಣಾ ಫಲಿತಾಂಶ ಬಳಿಕ ಸೋಂಕು ದೃಢಪಟ್ಟ ಬಳಿಕ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ತೆಕ್ಕಟ್ಟೆ : ಕೋವಿಡ್ ಗೆದ್ದ ಒಂದೇ ಮನೆಯ 19 ಮಂದಿ

Advertisement

ಸಚಿವ ಕಾರಜೋಳ ಸಂತಾಪ: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನಾಗನೂರಿ ಅವರ ನಿಧಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರೂ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಹಲವಾರು ವರ್ಷಗಳಿಂದ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ನಾಗನೂರಿ ಅವರ ನಿಧನದಿಂದ ಆಘಾತ ಉಂಟಾಗಿದೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next