Advertisement

Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

12:16 PM Jul 05, 2024 | Team Udayavani |

ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.

Advertisement

2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುನ್ನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ (5-5-2022) ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಿತೇಶ್ ಪಾಟೀಲ ಅವರು, ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿ ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next