Advertisement

ನಮ್ಮ ಪಾಲಿನ ನೀರನ್ನು ಪಡೆಯುವ ಯೋಜನೆಗಳ ಜಾರಿಗೆ ಸದಾ ಬದ್ಧ: ಗೋವಿಂದ ಕಾರಜೋಳ

01:49 PM Sep 11, 2021 | Team Udayavani |

ಬೆಳಗಾವಿ: ನಮ್ಮ ಪಾಲಿನ ನೀರನ್ನು ಉಪಯೋಗಮಾಡಿಕೊಳ್ಳಲು ಯೋಜನೆಗಳ ಜಾರಿಗೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು.

Advertisement

ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ನೀರಾವರಿ ಮಂತ್ರಿಯಾಗಿ ಒಂದು ತಿಂಗಳಾಗಿದೆ. ಈ ಅವಧಿಯಲ್ಲಿ ಎರಡು ಬಾರಿ ಸಿಎಂ ಜೊತೆಗೆ ದೆಹಲಿಗೆ ಹೋಗಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರಸಿಂಗ್ ಶೇಖಾವತ್ ಅವರ ಜೊತೆಗೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಭೆ ಮಾಡಿದ್ದೇವೆ. ಅವರೂ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಇದಲ್ಲದೆ  ಕಾನೂನು ತಜ್ಞರ ಜೊತೆಗಿನ ಸಭೆಯಲ್ಲಿ ಅಂತರ್ ರಾಜ್ಯ ಜಲವಿವಾದಗಳಲ್ಲಿ ನಮ್ಮ ಪರವಾಗಿ ತೀರ್ಪು ಬರುವಂತೆ ವಾದ ಮಾಡುವಂತೆ ಮುಖ್ಯಮಂತ್ರಿಗಳು  ಸೂಚನೆ ಕೊಟ್ಟಿದ್ದಾರೆ ಎಂದ ಅವರು ಎತ್ತಿನಹೊಳೆ ಯೋಜನೆಯಲ್ಲಿ ನಮಗೆ 24 ಟಿಎಂಸಿ ನೀರು ಬರಲಿದೆ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಖಂಡಿತವಾಗಲೂ ನಮ್ಮ ಪಾಲಿನ ನೀರನ್ನು ಉಪಯೋಗ ಮಾಡಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಮುಂಬೈ: ನಿರ್ಭಯಾ ರೀತಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು

ಸುವರ್ಣ ವಿಧಾನಸೌಧಕ್ಕೆ ಸರಕಾರದ ಕೆಲವು ಕಚೇರಿಗಳನ್ನು  ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ. ಇದನ್ನು ಐತಿಹಾಸಿಕ ನಗರವಾಗಿ  ಸಾಬೀತು ಮಾಡಬೇಕು ಎಂದು ನಿರ್ಧರಿಸಿದ್ದೇವೆ.  ಈ ನಿಟ್ಟಿನಲ್ಲಿ ಇನ್ನೂ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಕುರಿತು  ಶಾಸಕರು, ಸಂಸದರು ತೀರ್ಮಾನಿಸುತ್ತಾರೆ ಎಂದು ಹೇಳಿದರು.  ಬೆಳಗಾವಿ ಜಿಲ್ಲೆಯ ಕೆಲ ಶಾಸಕರ ಒಗ್ಗಟ್ಟಿನ ಪ್ರಯತ್ನದ ಪ್ರತಿಫಲವಾಗಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಹುತೇಕ ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರ ವಹಿಸಲಿದೆ. ಕಲಬುರ್ಗಿ ಪಾಲಿಕೆಯಲ್ಲಿಯೂ ನೂರಕ್ಕೆ ನೂರು ನಾವೇ  ಬರುತ್ತೇವೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬೆಳಗಾವಿಯ ವಿಷಯದಲ್ಲಿ ಪದೇ ಪದೇ ವಿವಾದ ಉಂಟುಮಾಡುವ ಎಂ ಇ ಎಸ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಯಾರೋ ಹೇಳುತ್ತಾರೆ ಎಂದು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕರ್ನಾಟಕದ ಒಂದಿಂಚೂ ನೆಲ ಕೊಡುವುದಿಲ್ಲ. ಈ ವಿಷಯದಲ್ಲಿ ಮಹಾಜನ ವರದಿಯೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next