Advertisement

ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ

06:12 PM Oct 26, 2021 | Team Udayavani |

ಚಿಕ್ಕೋಡಿ: ಸಮಾಜದಲ್ಲಿ ತುಳಿತಕ್ಕೆ ಒಳಗಾದ ವಿಧವೆಯರಿಗೆ ಬೆಳಗಾವಿ ಜಿಲ್ಲೆಗೆ 8 ಸಾವಿರ ಮನೆ ಮಂಜೂರು ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ತಾಲೂಕಿನ 9 ಗ್ರಾಮ ಪಂಚಾಯತಿಯ 120 ಮನೆಗಳು ಮಂಜೂರಾಗಿವೆ ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

Advertisement

ಇಲ್ಲಿನ ಸಿಎಲ್ ಇ ಸಂಸ್ಥೆಯ ಸಭಾ ಭವನದಲ್ಲಿ ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು ಇವರ ವತಿಯಿಂದ ದೇವರಾಜ ಅರಸು ವಿಶೇಷ ವಸತಿ ಯೋಜನೆಯಡಿ ಚಿಕ್ಕೋಡಿ ಸದಲಗಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತಿಗಳ ವಸತಿ ರಹಿತ ವಿಧವೆಯರಿಗೆ ಮನೆಗಳ ಹಕ್ಕು ಪತ್ರ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ 10 ಸಾವಿರ ಮನೆ ನೀಡುವ ಗುರಿ ಮಾಡಲಾಗಿತ್ತು. ಅದನ್ನು ಸದುಪಯೋಗ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ಅನಧಿಕೃತ ವೈದ್ಯಕೀಯ ತರಬೇತಿ : ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೋಟಿಸ್

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಬೆಳಗಾವಿ ಜಿಲ್ಲೆಗೆ 8 ಸಾವಿರ ಮನೆಗಳು ಮಂಜೂರು ಮಾಡಲಾಗಿದೆ ಎಂದರು.

Advertisement

ಸಮಾಜದ ಋಣವನ್ನು ತೀರಿಸಲು ಬಡ ಜನರ ಸೇವೆಗೆ ಮಾಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಸರಕಾರದ ಹಲವು ಯೋಜನೆ ತಲುಪಿಸಲಾಗುತ್ತದೆ ಎಂದರು.

ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ.ಸಂಪಾದನ್ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ವೇದಿಕೆ ಮೇಲೆ ತಹಶೀಲ್ದಾರ ಎನ್.ಬಿ.ಗೆಜ್ಜಿ. ಭರತೇಶ ಬನವಣೆ. ತಾ.ಪಂ ಕಾರ್ಯನಿರ್ವಹಕ ವೀರಣ್ಣ ವೀರನ್ನವರ. ಶೈಲಜಾ ಪಾಟೀಲ. ಪುರಸಭೆ ಉಪಾಧ್ಯಕ್ಷ ಸಂಜಯ ಕವಟಗಿಮಠ ಮುಂತಾದವರು ಇದ್ದರು. ಸತೀಶ ಅಪ್ಪಾಜಿಗೋಳ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next