Advertisement

Belagavi: ಬಿಲ್ ಪಾಸು ಮಾಡುತ್ತಿಲ್ಲ ಎಂದು ಆತ್ಮಹತ್ಯೆ ಗೆ ಯತ್ನಿಸಿದ ಗುತ್ತಿಗೆದಾರ

05:16 PM Oct 11, 2023 | Team Udayavani |

ಬೆಳಗಾವಿ: ರಸ್ತೆ ಕಾಮಗಾರಿ ಮಾಡಿದ್ದರೂ ಅಧಿಕಾರಿಗಳು ಬಿಲ್ ಪಾಸು ಮಾಡುತ್ತಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ಬುಧವಾರ ನಡೆದಿದೆ.

Advertisement

ಮನನ ನಾಗಪ್ಪ ಭಂಗಿ ಎಂಬ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದವರು. ತಾವು ಮಾಡಿರುವ ರಸ್ತೆ ಕಾಮಗಾರಿಯ ಬಿಲ್ ಪಾಸು ಮಾಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ ನಾಗಪ್ಪ ಅವರು ಬುಧವಾರ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜನಿಯರ್ ಎಸ್ ಎಸ್ ಸೊಬರದ ಅವರ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಪ್ರಯತ್ನ ಮಾಡಿದರು.ತತ್ ಕ್ಷಣವೇ ಸ್ಥಳದಲ್ಲಿ ಇದ್ದ ಜನರು ನಾಗಪ್ಪ ಅವರಿಂದ ಬಾಟಲಿ ಕಸಿದಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದರು.

ನಾಗಪ್ಪ ಈಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷ ನಾಗಪ್ಪ ಭಂಗಿ ಅವರು ಹಲಗಾ ಮತ್ತು ತಿಗಡಿ ಗ್ರಾಮದವರೆಗಿನ ರಸ್ತೆ ನಿರ್ಮಾಣ ಗುತ್ತಿಗೆ ಪಡೆದಿದ್ದು 6.50 ಲಕ್ಷ ರೂ ಕಾಮಗಾರಿ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಪಾಸು ಮಾಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಇದರಿಂದ ಬಹಳ ತೊಂದರೆಯಾಗಿದೆ ಎಂದು ನಾಗಪ್ಪ ದೂರಿದ್ದರು.

ಸಚಿವ ಸತೀಶ್ ಜಾರಕಿಹೊಳಿ ಅವರ ತವರು ಜಿಲ್ಲೆ(ಜಿಲ್ಲಾ ಉಸ್ತುವಾರಿ) ಹಾಗೂ ಲೋಕೋಪಯೋಗಿ ಇಲಾಖೆಯ ಮುಂದೆಯೇ ಈ ಘಟನೆ ನಡೆದಿರುವದು ಅಚ್ಚರಿ ಮೂಡಿಸಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಗುರಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.