Advertisement
ಉತ್ತರ ಕರ್ನಾಟಕ ಪ್ರಾದೇಶಿಕ ಅಸಮತೋಲನ, ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳ ಕುರಿತು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರಾಜ್ಯ ರೈತ ಕಳಸಾ-ಬಂಡೂರಿ ಹೋರಾಟ ಸಮಿತಿ ಸೇರಿದಂತೆ ಇತರೆ ಸಂಘಟನೆಗಳು ಶುಕ್ರವಾರ ಕೆಲವು ನಿರ್ಣಯಗಳನ್ನು ತೆಗೆದುಕೊಂಡವು.
Related Articles
Advertisement
ರೈತ ಮುಖಂಡ ಸಿದಗೌಡ ಮೋದಗಿ ಮಾತನಾಡಿ, ಕೇವಲ ಎರಡು ವರ್ಷದ ಹಿಂದೆ ನಡೆದ ಹೋರಾಟಕ್ಕೆ ಮಣಿದು ಮೇಕೆದಾಟು ಯೋಜನೆಗೆ ಸರಕಾರ ಚಾಲನೆ ನೀಡಿದೆ. 5500 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಮುಂದಾಗಿದೆ. 50 ವರ್ಷಗಳಿಂದ ಮಹದಾಯಿಗಾಗಿ ನಿರಂತರ ಹೋರಾಟ ನಡೆದಿದ್ದರೂ ಸರಕಾರಗಳು ಕಣ್ಣು ಮುಚ್ಚಿ ಕುಳಿತಿವೆ. ಅನೇಕ ಸಲ ಹೋರಾಟ ನಡೆಸಿ ಸರಕಾರದ ಕಣ್ಣು ತೆರೆಸಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ದೂರಿದರು.
ಕಾವೇರಿ ಹೋರಾಟಗಾರರ ಮೇಲಿನ ಕೇಸ್ ಗಳನ್ನು ಹಿಂಪಡೆಯಲಾಗಿದೆ. ಆದರೆ ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆದಿಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತ ಬರಲಾಗಿದೆ ಎಂದು ದೂರಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹೋರಾಟಕ್ಕಾಗಿ ನಿರ್ಮಿಸಿಕೊಂಡಿದ್ದ ಪೆಂಡಾಲ್ ಹಾಗೂ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇಲ್ಲದ ನಿಯಮ ಈಗ ಏಕೆ ಬಂತು. ಚುನಾವಣೆ ಬಳಿಕ ಪೆಂಡಾಲ್ ನಿರ್ಮಿಸದಿದ್ದರೆ ಹೋರಾಟ ಮಾಡುವುದಾಗಿ ಎಂದು ಎಚ್ಚರಿಕೆ ನೀಡಿದರು. ಮುಖಂಡ ಲಕ್ಷ್ಮಣ ಬಕಾಯಿ ಮಾತನಾಡಿ, ಗೋವಾ ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿ, ಕಾಮಗಾರಿ ಆರಂಭಿಸಿದೆ. ಆದರೆ ರಾಜ್ಯ ಸರಕಾರ ಮಾತ್ರ ಸುಮ್ಮನೆ ಕುಳಿತಿದೆ. ರಾಜ್ಯದ ಪಾಲಿನ ನೀರನ್ನು ಸದ್ಬಳಕೆ ಮಾಡಿಕೊಳ್ಳದಿದ್ದರೆ ರೈತರಿಗೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಲಿದೆ. ನೀರಿನ ಸದ್ಬಳಕೆ ಆಗದಿದ್ದರೆ ಕರ್ನಾಟಕಕ್ಕೆ ನೀರಿನ ಅಗತ್ಯವಿಲ್ಲ ಎಂದು ಗೋವಾ ಸರಕಾರ ಕೋರ್ಟ್‌ನಲ್ಲಿ ವಾದ ಮಂಡಿಸುವ ಸಾಧ್ಯತೆ ಇದೆ. ಹೀಗಾಗಿ ತ್ವರಿತ ಗತಿಯಲ್ಲಿ ಅವಕಾಶ ನೀಡಿದಂತಾಗುತ್ತದೆ. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.
ಮುಖಂಡ ಶಂಕರಗೌಡ ಪಾಟೀಲ ಮಾತನಾಡಿ, ಕಣಕುಂಬಿಯಲ್ಲಿ ನಿರ್ಮಿಸಲಾಗಿರುವ ತಡೆಗೋಡೆಯನ್ನು ಸರಕಾರ ತೆರವುಗೊಳಿಸಬೇಕು. ಇಲ್ಲದಿದ್ದರೆ ಹೋರಾಟಗಾರರೇ ಸ್ಥಳಕ್ಕೆ ಹೋಗಿ ತೆರವುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಮುಖಂಡ ಅಶೋಕ ಪೂಜಾರಿ, ಹೋರಾಟಗಾರರಾ ಬಿ.ಎ. ಮುಧೋಳ, ರಮೇಶ ಭೋಸಲೆ, ನಿಂಗಮ್ಮ ಮಾಳೇರ, ಎ.ಎಸ್. ಪೀರಜಾದೆ, ಕರೆಪ್ಪ ಹೊನ್ನಾಪುರ, ಇಲಿಯಾಸ ಪಾಟೀಲ ಸೇರಿದಂತೆ ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ರೈತರು ಭಾಗವಹಿಸಿದ್ದರು.
ಕಣಕುಂಬಿಗೆ ತೆರಳಲು ರೈತ ಮುಖಂಡರ ಪಟ್ಟು ಕಣಕುಂಬಿಗೆ ಹೋಗಿ ಕಳಸಾ-ಬಂಡೂರಿ ಯೋಜನೆಯ ಸದಸ್ಯದ ಸ್ಥಿತಿಗತಿ ಪರಿಶೀಲಸಲು
ತೆರಳಲು ಪಟ್ಟು ಹಿಡಿದ ರೈತ ಮುಖಂಡರನ್ನು ಪೊಲೀಸರು ತಡೆ ಹಿಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರು, ಸದ್ಯ ಸಂಬಂಧಿಸಿದ ಅಧಿಕಾರಿಗಳನ್ನಾದರೂ ಕರೆಯಿಸಬೇಕು ಇಲ್ಲವೇ ಸ್ಥಳಕ್ಕೆ ಹೋಗಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು, ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈಗ ಯಾವುದೇ ನಿರ್ಣಯ ತೆಗೆದುಕೊಳ್ಳಲು ಆಗುವುದಿಲ್ಲ. ಅನುಮತಿ ಪಡೆದುಕೊಂಡು ತಾವು ಅಲ್ಲಿಗೇ ಹೋಗಬೇಕು ಎಂದು ಹೇಳಿದರು. ಆದರೆ ಇದಕ್ಕೆ ಒಪ್ಪದೇ ಸ್ಥಳಕ್ಕೆ ಹೋಗಲು ಪಟ್ಟು ಹಿಡಿದರು. ನಂತರ ಪೊಲೀಸರು ಕೆಲವು ನಿಯಮಗಳನ್ನು ಹಾಕಿ ಬಂದೋಬಸ್ತಿನಲ್ಲಿ ಖಾನಾಪುರಕ್ಕೆ ಕರೆದುಕೊಂಡು ಹೋದರು.