ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಸುವರ್ಣ ವಿಧಾನಸೌಧ ಬಳಿಯ ಕಮಕಾರಹಟ್ಟಿ ಗುಡ್ಡದಲ್ಲಿ ವಿರಾಟ್ ಪಂಚಶಕ್ತಿ ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನಸಾಗರ ಹರಿದು ಬರುತ್ತಿದೆ.
ಸುವರ್ಣ ವಿಧಾನಸೌಧ ಬಳಿ ಕಮಕಾರಹಹ್ಟಿ ಗ್ರಾಮದ ವಿಶಾಲ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಪಾದಯಾತ್ರೆ ಮೂಲಕ ಜನಸಾಗರ ಬರುತ್ತಿದೆ. 100 ಎಕರೆ ಪ್ರದೇಶದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಹಿರೇಬಾಗೇವಾಡಿ ಗ್ರಾಮದಿಂದ ಪಾದಯಾತ್ರೆ ಮೂಲಕ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮಾಜದವರು ಆಗಮಿಸುತ್ತಿದ್ದಾರೆ. 2ಎ ಮೀಸಲಾತಿ ನೀಡುವಂತೆ ಪ್ರಮುಖ ಬೇಡಿಕೆ ಇಟ್ಟುಕೊಂಡು ಸಮಾಜ ಬಾಂಧವರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.