Advertisement

Belagavi; ಅಂತಿಮ ಘಟ್ಟದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

02:14 PM Jul 11, 2024 | Team Udayavani |

ಬೆಳಗಾವಿ: ನಮ್ಮ ಇಡೀ ಕುಟುಂಬ ಪಂಚಮಸಾಲಿ ಸಮಾಜ ಮೀಸಲಾತಿ ಹೋರಾಟದಲ್ಲಿ ಇರುತ್ತದೆ. ನಮ್ಮ ಬದ್ಧತೆಯನ್ನು ಉಳಿಸಿಕೊಳ್ಳುತ್ತೇವೆ. ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಅಂತಿಮಘಟ್ಟ ತಲುಪಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Advertisement

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಕೂಡಲಸಂಗಮ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾರಥ್ಯದ ನಿಯೋಗಕ್ಕೆ ಭರವಸೆ ನೀಡಿದರು.

ವಿಧಾನಸಭೆಯ ಅಧಿವೇಶನದಲ್ಲಿ ಸಮಾಜದ ಎಲ್ಲ ಶಾಸಕ, ಸಚಿವರನ್ನು ಒಟ್ಟಿಗೆ ಸೇರಿಸಿ ಚರ್ಚೆ ಮಾಡುತ್ತೇವೆ. ನಾವು ಬಸವ ತತ್ವದ ಮೇಲೆ ನಡೆಯುವವರು. ಸಮಯ ಪ್ರಜ್ಞೆ ನಮಗಿದ್ದು, ತಾಳ್ಮೆಯಿಂದ ಹೋರಾಡುತ್ತೇವೆ. ಆದರೆ, ನಮ್ಮ ತಾಳ್ಮೆಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈಗ ಮೀಸಲಾತಿ ತೆಗೆದುಕೊಂಡಿಲ್ಲ ಎಂದರೆ ಮುಂದೆ ಸಿಗಲು ಸಾಧ್ಯವಿಲ್ಲ. ಈಗ ನಿರ್ಣಾಯಕ ಘಟಕ್ಕೆ ಬಂದು ನಿಂತಿದೆ ಎಂದು ಹೇಳಿದರು.

ನಾನು ಕಿತ್ತೂರು ರಾಣಿ ಚನ್ನಮ್ಮನವರ ವಂಶಸ್ಥಳು. ಚನ್ನಮ್ಮ ಎದೆಗುಂದದೆ ಹೋರಾಟ ಮಾಡಿದ್ದಾಳೆ. ಗೆದ್ದಾಗ ಸೋಕ್ಕು ತೋರುವುದು, ಸೋತಾಗ ಸೊರಗುವುದು ನಮ್ಮ ಗುಣವಲ್ಲ. ರಾಜಕಾರಣ ನಿಂತ ನೀರಲ್ಲ. ಸಮಾಜದ ಎಲ್ಲಾ ಬಾಂಧವರು ನನ್ನ ಪರವಾಗಿ ನಿಂತಿರುವುದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಹೆಬ್ಬಾಳ್ಕರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next