Advertisement

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

01:02 PM Sep 22, 2024 | Team Udayavani |

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ( 2A reservation) ‌ವಿಚಾರವಾಗಿ ಸರಕಾರ ಮತ್ತು ಮುಖ್ಯಮಂತ್ರಿಗಳು ಶಾಸಕರ ಹಾಗೂ ಸ್ಚಾಮೀಜಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಈಗ ವಕೀಲರ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮೀಸಲಾತಿ ಸಂಬಂಧ ಶೀಘ್ರದಲ್ಲೇ ಸಿಎಂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.

Advertisement

ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಭೆಯ ದಿನಾಂಕ, ಸಮಯ ನಿಗದಿ ಮಾಡದೆ ಇದ್ದರೆ ಉಗ್ರ ಹೋರಾಟ ಮಾಡಲಾಗುದು ಎಂದು ಎಚ್ಚರಿಕೆ ನೀಡಿದರು.

ಮೀಸಲಾತಿಗಾಗಿ ಸರ್ಕಾರ ಮೇಲೆ ಒತ್ತಡ ತರಲು ಪ್ರಥಮ ಬಾರಿಗೆ ರಾಜ್ಯಮಟ್ಟದ ವಕೀಲರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next