Advertisement

ಬೆಳಗಾವಿಯಲ್ಲಿ ಸಿಡಿದೆದ್ದ ಕನ್ನಡಿಗರು: ಪಾದಯಾತ್ರೆಗೆ ತಡೆ, ಪ್ರತಿಭಟನಾನಿರತರು ವಶಕ್ಕೆ

12:11 PM Dec 19, 2021 | Team Udayavani |

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗೆ ಅವಮಾನ ಮಾಡಿದ್ದನ್ನು ಖಂಡಿಸಿ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪೀರನವಾಡಿ ಗ್ರಾಮದಿಂದ ಅನಗೋಳವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಡೆದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.

Advertisement

ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಕಿರಣ್ ಮಾಡಿ ಬಳಿಯಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಅಲ್ಲಿಂದ ಅನಗೋಳದ ಕನಕದಾಸ ಕಾಲೋನಿ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದರು. 144 ಕಲಂ ಅಡಿ ನಿಷೇಧಾಜ್ಞೆ ಜಾರಿ ಇರುವುದರಿಂದ ಪೊಲೀಸರು ಪಾದಯಾತ್ರೆಗೆ ಅವಕಾಶ ನೀಡದೇ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದುಕೊಂಡರು. ಪೀರನವಾಡಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸುತ್ತಲೂ ಬಂದೋಬಸ್ತ್ ಮಾಡಲಾಗಿದೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಬೆಳಗಾವಿಯಲ್ಲಿ ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next