Advertisement
ಇಲ್ಲಿಯ ಖಾಸಬಾಗದ ಸಾಯಿ ಸಭಾಭವನದಲ್ಲಿ ರವಿವಾರ ನಡೆದ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನವಸಂಕಲ್ಪ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಪಕ್ಷದ ನಾಯಕರು ಸುಮಾರು ವಿಷಯಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದಾರೆ. ಮೇಲಿಂದ ಮೇಲೆ ಇಂತಹ ಕಾರ್ಯಕ್ರಮಗಳು ನಡೆದು ಕಾರ್ಯಕರ್ತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಎಂದರು.
Related Articles
Advertisement
ವಿಧಾನಸಭೆ ಚುನಾವಣೆಗಿಂತ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾವು ಒಳ್ಳೆಯ ಮತ ಪಡೆದಿದ್ದೇವೆ. ಬೆಳಗಾವಿ ದಕ್ಷಿಣದಲ್ಲಿ ಎರಡು ಸ್ಥಾನಗಳಲ್ಲಿ ಗೆದ್ದಿದ್ದೇವೆ. ಉತ್ತರ ಕ್ಷೇತ್ರದಲ್ಲಿಯೂ ಅದೇ ರೀತಿಯಾಗಿದೆ. ನಮ್ಮ ಪ್ರಕಾರ ಕನಿಷ್ಠ 18 ರಿಂದ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ನಮ್ಮಲ್ಲಿನ ಹೊಂದಾಣಿಕೆ ಕೊರತೆಯಿಂದಾಗಿ ನಾವು ಸೋತಿದ್ದೇವೆ. ಇದು ನಮಗೆ ಪಾಠವಾಗಿದೆ. ಲೋಕಸಭೆ ಉಪಚುನಾವಣೆ, ಪಾಲಿಕೆ ಚುನಾವಣೆ ಎದುರಿಸಿರುವುದರಿಂದ ನಮಗೆ ಈಗ ಒಂದು ಅಂದಾಜು ಗೊತ್ತಾಗಿದೆ ಎಂದರು.
ಆಗಾಗ ಇಂತಹ ಸಭೆ ಮತ್ತು ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಪಕ್ಷದ ಕಾರ್ಯಕರ್ತರ ಸಮಸ್ಯೆಗಳು, ಬಡವರು, ನೇಕಾರರು, ಜಿಎಸ್‌ಟಿ ಸಮಸ್ಯೆ ಕುರಿತು ಚರ್ಚಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಹಾಲು, ಮೊಸರು ಹೀಗೆ ಯಾವುದನ್ನೂ ಬಿಡದೇ ಜಿಎಸ್‌ಟಿ ವಿಧಿಸಿದ್ದಾರೆ. ಈ ಕುರಿತು ಜನಜಾಗೃತಿ ಮೂಡಿಸಲು ಸಮಾವೇಶ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಷ್ಟು ಸಾಧ್ಯವಾಗುತ್ತದೆಯೋ ಅಷ್ಟು ಬಡವರಿಗೆ ಹೊರೆ ಮಾಡಿದ್ದಾರೆ. ಶ್ರೀಮಂತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾಂಗ್ರೆಸ್ ಪಕ್ಷ ದಿನದಿಂದ ದಿನಕ್ಕೆ ಬಲಿಷ್ಠಗೊಳ್ಳುತ್ತಿದೆ. ಬೇರೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಕಡೆಗೆ ಮುಖ ಮಾಡಿದ್ದಾರೆ. ಕಾಂಗ್ರೆಸ್ ಎಂದರೆ ಶಕ್ತಿ. ಹಲವಾರು ಮಹನೀಯರು ಪಕ್ಷವನ್ನ ಕಟ್ಟಿ ಅಮೋಘವಾದ ಕೊಡುಗೆಗಳನ್ನು ನೀಡಿ ಕೊನೆಗೆ ತಮ್ಮ ಜೀವಗಳನ್ನೇ ದೇಶಕ್ಕೆ ಸಮರ್ಪಿಸಿದ್ದಾರೆ. ಇವರೆಲ್ಲರ ತ್ಯಾಗ ಬಲಿದಾನಗಳನ್ನು ಸ್ಮರಿಸುವ ಮೂಲಕ ಪಕ್ಷವನ್ನು ಇನ್ನೂ ಉತ್ತುಂಗಕ್ಕೆ ಏರಿಸುವ ಕೆಲಸ ಮಾಡೋಣ ಎಂದರು.
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಮಾಜಿ ಶಾಸಕ ರಮೇಶ ಕುಡಚಿ, ಸುನೀಲ ಹಣಮನ್ನವರ, ರವೀಂದ್ರ ನಾಯ್ಕರ್, ಬಿ.ಎಸ್ .ನಾಡಕರ್ಣಿ, ಸರಳಾ ಸಾತಪುತೆ ಮೊದಲಾದವರು ಉಪಸ್ಥಿತರಿದ್ದರು.