Advertisement

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

02:43 PM Oct 17, 2024 | Team Udayavani |

ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

Advertisement

ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕರಾಗಿರುವ ಸಾಧು ಕೋಕಿಲ ಮತ್ತು ಜೀ ಕನ್ನಡ ಸರಿಗಮಪ ತಂಡದವರು ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ. ಇದಲ್ಲದೆ ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ, ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next