Advertisement

Belagavi ಜಿಲ್ಲೆಯ ಫಾಲ್ಸ್ ಗಳ ಭೇಟಿಗೆ ನಿರ್ಬಂಧ: ಜಿಲ್ಲಾಧಿಕಾರಿ

08:19 PM Jul 26, 2023 | Team Udayavani |

ಬೆಳಗಾವಿ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ಜಲಪಾತಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

Advertisement

ಜಲಪಾತದ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ.

ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ಧೇಶದಿಂದ ಜಿಲ್ಲೆಯಲ್ಲಿರುವ ಫಾಲ್ಸ್ ಸಮೀಪ ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಲ್ಲದೇ ಅರಣ್ಯ ಪ್ರದೇಶದಲ್ಲಿರುವ ಫಾಲ್ಸ್ ಗಳಿಗೆ ಸಾರ್ವಜನಿಕರು ಭೇಟಿ ನೀಡುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗೋಕಾಕ ಸೇರಿದಂತೆ ಜಿಲ್ಲೆಯ ಕೆಲವು ಪ್ರಸಿದ್ಧ ಜಲಪಾತಗಳನ್ನು ಪ್ರವಾಸಿಗರು ದೂರದಿಂದ ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ಇದರ ಬಳಿ ನಿಗಾ ವಹಿಸಲು ಅರಣ್ಯ ಇಲಾಖೆಯ ಸಿಬ್ಬಂದಿ, ಪ್ರವಾಸಿಮಿತ್ರರು ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ.

ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಕೂಡ ಅಪಾಯಕಾರಿ ಸ್ಥಳಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next