ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದಕ್ಕೆ ಗಲಭೆ ಕಂಡಿದ್ದ ಕುಂದಾನಗರಿ ಬೆಳಗಾವಿ ರವಿವಾರ ಸಹಜ ಸ್ಥಿತಿಗೆ ಮರಳಿದೆ. ಎಂದಿನಂತೆ ಸಹಜ ಜನಜೀವನ ಆರಂಭಗೊಂಡಿದೆ.
ಮಹಾನ್ ಪುರುಷರ ಪ್ರತಿಮೆಗಳಿಗೆ ಅವಮಾನ ಮಾಡಿ ಶಾಂತಿ ಕದಡುತ್ತಿದ್ದವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದಲ್ಲಿ ಎಲ್ಲವೂ ಶಾಂತವಾಗಿದ್ದು, ಆತಂಕವಿಲ್ಲದೇ ಜನರು ಓಡಾಟ ನಡೆಸಿದ್ದಾರೆ. ವ್ಯಾಪಾರ-ವಹಿವಾಟು ಎಂದಿನಂತೆ ಶುರುವಾಗಿದೆ.
ಚಳಿಗಾಲ ಅಧಿವೇಶನಕ್ಕೆ ಬಂದಿದ್ದ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆದಿದ್ದರಿಂದ ದ್ವೇಷಮಯ ವಾತಾವರಣ ನಿರ್ಮಾಣವಾಗಿದ್ದ ಬೆಳಗಾವಿಯಲ್ಲಿ ಈಗಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ
ಘಟನೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಹಿಂದೂಸ್ಥಾನ ಅಧ್ಯಕ್ಷ ರಮಾಕಾಂತ ಕೊಂಡುಸ್ಕರ, ಎಂಇಎಸ್ ಮುಖಂಡ ಶುಭಂ ಶೇಳಕೆ ಸೇರಿದಂತೆ 27 ಮಂದಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.