Advertisement

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

10:10 AM Aug 20, 2022 | Team Udayavani |

ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

Advertisement

ಶಾಲಾ ಬಸ್ ನಲ್ಲಿದ್ದ ೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

Advertisement
Advertisement

Udayavani is now on Telegram. Click here to join our channel and stay updated with the latest news.

Next