Advertisement
ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗುತ್ತಿದ್ದಂತೆ ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಗೆ ಬಂದು ನೋಡಿ ಹೋದವರು ಅನಂತರ ತಲೆಮರೆಸಿಕೊಂಡಿದ್ದಾರೆ. ಬುಧವಾರ ಸಂಜೆ ತಹಶೀಲ್ದಾರ್ ಕಚೇರಿ ಬಳಿ ವಾಹನ ನಿಂತಿದೆ. ಸಚಿವರ ಆಪ್ತ ಸಹಾಯಕ ಸೋಮು ದೊಡವಾಡಿ ಹಾಗೂ ಅಶೋಕ ಕಬ್ಬಿಲಿಗೇರ ಕೂಡ ನಾಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮುನ್ನ ದಿನ ರುದ್ರಣ್ಣ ಕಚೇರಿಯ ಎಲ್ಲ ಸಿಬಂದಿ ವಾಟ್ಸ್ಆಪ್ ಗ್ರೂಪ್ನಲ್ಲಿಯೇ ಡೆತ್ನೋಟ್ ಕಳುಹಿಸಿ, ಕೆಲವು ಸಹೋದ್ಯೋಗಿಗಳಿಗೆ ಹಾಗೂ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಆತ್ಮಹತ್ಯೆಯ ಸುಳಿವು ಕೊಟ್ಟಿದ್ದರು ಎನ್ನಲಾಗಿದೆ.
ಹುಬ್ಬಳ್ಳಿ: ಬೆಳಗಾವಿ ತಹಶೀಲ್ದಾರ್ ಕಚೇರಿ ಸಿಬಂದಿ ಆತ್ಮಹತ್ಯೆ ಪ್ರಕರಣ ಕುರಿತು ಕಾನೂನು ಪ್ರಕಾರ ಸಮಗ್ರ ತನಿಖೆ ನಡೆಸಲಾಗುವುದು. ಯಾರ ಹೆಸರು ಉಲ್ಲೇಖ ಮಾಡಿದ್ದರೂ ಅದರ ಬಗ್ಗೆಯೂ ತನಿಖೆಯಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಇಂತಹ ಘಟನೆಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬಳಸಿಕೊಳ್ಳುತ್ತಾರೆ. ಇದಕ್ಕೆ ತಲೆ ಕೆಡಿಸಿಕೊಳ್ಳಲ್ಲ ಎಂದರು. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತದ ನೋಟಿಸ್ಗೆ ಗೌರವ ಕೊಟ್ಟು ಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ. ಕಾನೂನಿಗೆ ಗೌರವ ಕೊಡುವಂತಹ ನಮ್ಮ ಮುಖ್ಯಮಂತ್ರಿ ಎಂದು ಖುಷಿ ಪಡಬೇಕು. ಕೇವಲ ಎರಡು ಗಂಟೆ ವಿಚಾರಣೆ ಮಾಡಿದ್ದಾರೆ ಎಂದವರು ಹೇಳಿದರು.