Advertisement

Belagavi; ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

03:31 PM Feb 08, 2024 | Team Udayavani |

ಬೆಳಗಾವಿ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡಿರುವುದನ್ನು ಖಂಡಿಸಿ ಎಸ್‌ಡಿಪಿಐ ಸಂಘಟನೆ ವತಿಯಿಂದ ನಗರದ ಚನ್ನಮ್ಮ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

Advertisement

ಧಾರ್ಮಿಕ ಸ್ಥಳಗಳನ್ನು ಯಥಾಸ್ಥಿತಿಯಲ್ಲಿ ಇಡಬೇಕು ಎಂದು 1991ರಲ್ಲಿ ಕಾಯ್ದೆ ಇದೆ. ಆದರೆ ಈಗ ಏಕಾಏಕಿ ಮಸೀದಿ ಸ್ಥಳದಲ್ಲಿ ಪೂಜೆಗೆ ಅವಕಾಶ ಮಾಡಿಕೊಟ್ಟಿರುವುದು ತಪ್ಪು. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ, ಆರೆಸ್ಸೆಸ್‌ನವರು ಹಿಂದೂ-ಮುಸ್ಲೀಮರ ಮಧ್ಯೆ ಜಗಳ ಹಚ್ಚಲು ಈ ರೀತಿಯ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಂಡಾಗ ರಕ್ತಪಾತ, ದಂಗೆ ಆಯಿತು. ಈಗ ಜ್ಞಾನವಾಪಿ ಮಸೀದಿಗೆ ಕೈ ಹಾಕಿರುವುದು ಎಷ್ಟರ ಮಟ್ಟಿಗೆ ಸರಿ? ಪ್ರಾರ್ಥನಾ ಮಂದಿರಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next