Advertisement
ಸ್ವತಃ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರೇ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದು, ಅಧಿವೇಶನದ ಅತ್ಯಮೂಲ್ಯ ಸಮಯ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ. ಆದ್ದರಿಂದ ಅಧಿವೇಶನ ಆರಂಭಗೊಳ್ಳುವ ಮುನ್ನವೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಚರ್ಚಿಸಿ ಅವುಗಳ ಪರಿಹಾರಕ್ಕೆ ಮುಂದಾಗಬೇಕು. ಆ ಮೂಲಕ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಯದಂತೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.
Related Articles
Advertisement
ಮುಗಿಯದ ರೈತರ ಗೋಳುಬೆಳಗಾವಿಯಲ್ಲಿ ಇದುವರೆಗೆ ನಡೆದಿರುವ ಎಲ್ಲ ಅಧಿವೇಶನಗಳಲ್ಲಿ ರೈತರ ಪ್ರತಿಭಟನೆಗಳೇ ಹೆಚ್ಚು ಗಮನ ಸೆಳೆದಿವೆ. ಸರಕಾರಕ್ಕೆ ಸ್ವಲ್ಪ ಬಿಸಿ ಮುಟ್ಟಿಸಿವೆ. ಆದರೆ ಸಮಸ್ಯೆಗಳು ಮಾತ್ರ ಎಂದಿನಂತೆಯೇ ಮುಂದುವರಿದಿವೆ. 2006 ರಲ್ಲಿ ಆಗಿನ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಮೊದಲ ಅಧಿವೇಶನ ನಡೆದಾಗ ರೈತರು ಬೀದಿಗಿಳಿದಿದ್ದರು. ಕಬ್ಬಿನ ದರ ನಿಗದಿ, ಬಾಕಿ ಹಣ ಪಾವತಿ, ಎಲ್ಲ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಮತ್ತು ಸಾಲಮನ್ನಾ ಬೇಡಿಕೆಗಳ ಈಡೇರಿಕೆಗೆ ತೀವ್ರ ಸ್ವರೂಪದ ಹೋರಾಟ ಮಾಡಿದರು. ಆದರೆ ಬೇಡಿಕೆ ಈಡೇರಲಿಲ್ಲ. ಆಗ ಆರಂಭವಾದ ರೈತರ ಹೋರಾಟ ಇವತ್ತಿಗೂ ಮುಂದುವರಿದಿದೆ. ಪ್ರತಿಭಟನೆಗಳಿಗೆ ಸರಕಾರದಿಂದಲೇ ವ್ಯವಸ್ಥೆ!
ಪ್ರತಿಭಟನೆ ನಡೆಸುವ ಸಂಘಟನೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಡುವ ಸರಕಾರದ ನಡೆಯೂ ಚರ್ಚೆಗೆ ಕಾರಣವಾಗಿದೆ. ಇದಕ್ಕಾಗಿಯೇ ಜಿಲ್ಲಾಡಳಿತ ಕೋಟಿಗಟ್ಟಲೆ ರೂ. ಖರ್ಚು ಮಾಡುತ್ತಿದೆ. ಪ್ರತಿಭಟನೆ ಮಾಡುವವರಿಗೆ ಸುಸಜ್ಜಿತ ಹತ್ತರಿಂದ 12 ಬೃಹತ್ ಪೆಂಡಾಲ್‌ಗಳನ್ನು ನಿರ್ಮಿಸಿ ಕೊಡಲಾಗುತ್ತದೆ. ಇದಕ್ಕೆ ರೈತರ ಫಲವತ್ತಾದ ಜಮೀನುಗಳನ್ನು ಬಾಡಿಗೆ ಪಡೆದುಕೊಂಡರೆ ಭದ್ರತೆಗಾಗಿ 300ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಎಲ್ಲಕ್ಕಿಂತ ಅಚ್ಚರಿಯ ಸಂಗತಿ ಎಂದರೆ ಪ್ರತಿಭಟನಕಾರರನ್ನು ನಗರದ ಚನ್ನಮ್ಮ ವೃತ್ತದಿಂದ ಸುವರ್ಣ ವಿಧಾನಸೌಧದವರೆಗೆ ಸರಕಾರದ ಬಸ್‌ಗಳಲ್ಲಿ ಕರೆತಂದು ಪ್ರತಿಭಟನ ಸ್ಥಳಕ್ಕೆ ಬಿಡಲಾಗುತ್ತದೆ. ಇಷ್ಟೆಲ್ಲ ಸೌಲಭ್ಯಗಳಿರುವಾಗ ಪ್ರತಿಭಟನೆಗಳು ಹೇಗೆ ಕಡಿಮೆಯಾಗುತ್ತವೆ ಎಂಬುದು ಜನರ ಪ್ರಶ್ನೆ. ಪ್ರತಿಭಟನೆ ಮಾಡುವವರಿಗೆ ಬೇಡ ಎನ್ನಲಾಗದು. ಪ್ರತಿಭಟನೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಸಂಬಂಧಪಟ್ಟ ಪ್ರಮುಖ ಇಲಾಖೆಗಳ ಸಚಿವರು ಮೊದಲೇ ಅವರ ಅಹವಾಲುಗಳನ್ನು ಸ್ವೀಕರಿಸಿ ಮಾತುಕತೆ ಮಾಡಿದರೆ ಪ್ರತಿಭಟನೆಗಳು ಸ್ವಲ್ಪ ಕಡಿಮೆ ಆಗಬಹುದು.
– ಸತೀಶ ಜಾರಕಿಹೊಳಿ,
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ನಾವು ಡಿ.7ರಂದು ಪ್ರತಿಭಟನೆ ಮಾಡುವುದು ನಿಶ್ಚಿತ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಕಡೆ ಸಭೆಗಳನ್ನು ಮಾಡಲಾಗಿದೆ. ಐದು ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಇದುವರೆಗೆ ಯಾವುದೇ ಇಲಾಖೆಯ ಸಚಿವರು ನಮ್ಮನ್ನು ಸಂಪರ್ಕಿಸಿಲ್ಲ.
– ಚೂನಪ್ಪ ಪೂಜೇರಿ,
ರಾಜ್ಯ ರೈತ ಸಂಘದ ಅಧ್ಯಕ್ಷ -ಕೇಶವ ಆದಿ