Advertisement

Belagavi: ಮತ್ತೆ ಪ್ರತ್ಯೇಕ ರಾಜ್ಯದ ಎಚ್ಚರಿಕೆ ನೀಡಿದ ಆಡಿ ಹಂದಿಗುಂದದ ಸ್ವಾಮೀಜಿ

03:46 PM Dec 07, 2024 | Team Udayavani |

ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 30 ಸಾವಿರ ಕೋಟಿ ರೂ ಅನುದಾನ ಪ್ರತ್ಯೇಕವಾಗಿ ಮೀಸಲಿಡಬೇಕು ಎಂದು ಆಡಿ ಹಂದಿಗುಂದದ ಶಿವಾನಂದ ಸ್ವಾಮೀಜಿ ಆಗ್ರಹಿಸಿದರು.

Advertisement

ನಾಗನೂರು ರುದ್ರಾಕ್ಷಿಮಠದ ಲಿಂ.ಶಿವಬಸವ ಸ್ವಾಮೀಜಿ 135ನೇ ಜಯಂತಿ ಮಹೋತ್ಸವ ಪ್ರಯುಕ್ತ ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಯಾಗಲಿ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ನಡೆದ ಜಾಗೃತಿ ಜಾಥಾ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ವಾಮೀಜಿ, ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ, ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಹೆಸರಿಗೆ ಮಾತ್ರ ಇಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣವಾಯಿತು. ಆದರೆ, ಜನರ ಬದುಕು ಮಾತ್ರ ಬಂಗಾರವಾಗಲಿಲ್ಲ. ಬಹಳ ವರ್ಷಗಳಿಂದಲೂ ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮುಂದುವರಿದಿದೆ. ಇದಕ್ಕೆ ಕಡಿವಾಣ ಬೀಳದಿದ್ದರೆ, ಪ್ರತ್ಯೇಕ ರಾಜ್ಯದ ಬೇಡಿಕೆಗೆ ಮತ್ತೆ ಧ್ವನಿ ಬರಲಿದೆ ಎಂದು ಎಚ್ಚರಿಕೆ ಕೊಟ್ಟರು.

ಇಂದು ನಾವು ನಡೆಸುತ್ತಿರುವ ಹೋರಾಟ ಆರಂಭ ಮಾತ್ರ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಉತ್ತರ ಕರ್ನಾಟಕದ ಹಳ್ಳಿ–ಹಳ್ಳಿಗಳಿಂದ ಜನರು ಹೋರಾಟಕ್ಕೆ ಧುಮುಕುತ್ತಾರೆ. ಅದಕ್ಕಿಂತ ಮುನ್ನವೇ ಈ ಭಾಗಕ್ಕೆ ಅನ್ಯಾಯ ಸರಿಪಡಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ಬೆಳಗಾವಿಯಲ್ಲಿ ಕಾಟಾಚಾರಕ್ಕೆ, 10 ದಿನಗಳ ಅಧಿವೇಶನ ನಡೆಸಿದರೆ ಸಾಲದು. ಬದಲಿಗೆ 30 ದಿನಗಳವರೆಗೆ ಪೂರ್ಣ ಪ್ರಮಾಣದ ಅಧಿವೇಶನ ನಡೆಸಬೇಕು.  ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ರಾಜ್ಯಮಟ್ಟದ ಎಲ್ಲ ಇಲಾಖೆಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಈ ವಿಚಾರವಾಗಿ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ಗಟ್ಟಿಯಾದ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next