Advertisement
ನಗರದ ಖಾಸಬಾಗದ ಪಾಟೀಲ ಗಲ್ಲಿಯಲ್ಲಿ ನೂರ ಬಸೀರ್ ಅಹ್ಮದ್ ಹೊಸಪೇಟ (35), ಮಂಜೂರ್ ಹೊಸಪೇಟ ಎಂಬವರ ಮೇಲೆ ದಾಳಿ ನಡೆಸಿದ್ದರಿಂದ ತಲೆ, ಬೆನ್ನು, ಮುಖಕ್ಕೆ ಗಾಯಗಳಾಗಿದ್ದು ಯುವಕರು ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಗಲಾಟೆ ನಡೆಸಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ” ಹಲ್ಲೆಗೊಳಗಾದ ಇಬ್ಬರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ, ಗೌಂಡಿ ಕೆಲಸ ಮಾಡುತ್ತಿದ್ದ ಯುವಕರ ಮಧ್ಯೆ ಸಣ್ಣಪುಟ್ಟ ಜಗಳದಿಂದ ಹಲ್ಲೆಯಾಗಿದೆ. ಹಲ್ಲೆ ಪ್ರಕರಣ ಸಂಬಂಧ ಈಗಾಗಲೇ ಎರಡೂ ಗುಂಪಿನ ಕಡೆಯಿಂದಲೂ ಆರು ಮಂದಿ ಯುವಕರ ವಶಕ್ಕೆ ಪಡೆಯಲಾಗಿದೆ. ಹಲ್ಲೆಗೆ ಒಳಗಾದ ಇಬ್ಬರಿಗೆ ಗಂಭೀರ ಗಾಯವಾಗಿಲ್ಲ, ಸಣ್ಣಪುಟ್ಟ ಗಾಯಗಳಾಗಿದ್ದು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡವಾರದು ಎಂದು ಡಿಸಿಪಿ ರೋಹನ್ ಜಗದೀಶ್ ಹೇಳಿದ್ದಾರೆ.