Advertisement

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

03:22 PM Nov 23, 2024 | Team Udayavani |

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರಕ್ಕೆ ಸಿಕ್ಕ ಗೆಲುವು ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

Advertisement

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಉಪಚುನಾವಣೆ ಫಲಿತಾಂಶದ ಮೂಲಕ ಮೂರು ಕ್ಷೇತ್ರಗಳ ಮತದಾರರು ವಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮೂರು ಕ್ಷೇತ್ರಗಳ ಮತದಾರರು ಅಭಿವೃದ್ಧಿ ಕಾರ್ಯಗಳಿಗೆ ಮತ ಹಾಕಿದ್ದು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ವಿರೋಧ ಪಕ್ಷಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಫಲಿತಾಂಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರ ಕೈ ಮತ್ತಷ್ಟು ಬಲಗೊಂಡಿದೆ ಎಂದು ಹೆಬ್ಬಾಳಕರ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next