Advertisement

Belagavi: ನಾವು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ: ಸಿಎಂ ಸಿದ್ದರಾಮಯ್ಯ

02:24 PM Aug 26, 2024 | Team Udayavani |

ಬೆಳಗಾವಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ (ಆ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ. ಈ ಪ್ರಕರಣ ಸಂಬಂಧ ಈಗಾಗಲೇ ತಪ್ಪಿತಸ್ಥ ಏಳು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದರು.

ಇದಲ್ಲದೆ ಗೃಹಸಚಿವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಅವರ ವರದಿ ಆಧರಿಸಿ ಸ್ಥಳಾಂತರಕ್ಕೆ ಕ್ರಮವಹಿಸಲಾಗುವದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.