Advertisement

ಬೆಳಗಾವಿ ಪಾಲಿಕೆ‌ ಚುನಾವಣೆಗೆ ಬಿಜೆಪಿ ಪಟ್ಟಿ ಬಿಡುಗಡೆ: ಭುಗಿಲೆದ್ದ ಅಸಮಾಧಾನ

11:15 PM Aug 22, 2021 | Team Udayavani |

ಬೆಳಗಾವಿ: ಬೆಳಗಾವಿ ಪಾಲಿಕೆ‌ ಚುನಾವಣೆಗೆ ಬಿಜೆಪಿಯ ಮೊದಲ ಹಂತದ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಟಿಕೆಟ್ ಆಕಾಂಕ್ಷಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ವಾರ್ಡ್ ನಂಬರ್ 35ರಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಕ್ಷೇತ್ರದಲ್ಲಿ ಲಕ್ಷ್ಮೀ ರಾಠೋಡ ಎಂಬ ಮಹಿಳೆಗೆ ನೀಡಲಾಗಿದೆ. ಆದರೆ ಬಿಜೆಪಿ ಆಕಾಂಕ್ಷಿ ಆಗಿದ್ದ ದತ್ತಾ ಬಿಲಾವರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಹಲವು ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ಈಗ ಬೇರೆಯವರಿಗೆ ಟಿಕೆಟ್ ಕೊಟ್ಟಿರುವುದು ಸರಿಯಲ್ಲ. ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ್‌ ಬೆನಕೆ ಅವರಿಗೆ ಹೇಳಿದ್ದೇನೆ. ಇಬ್ಬರೂ ಟಿಕೆ್ ಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈಗ ಟಿಕೆಟ್ ತಪ್ಪಿಸಿದ್ದಾರೆ.

ನನಗೆ ಟಿಕೆಟ್ ನೀಡದಿದ್ದರೆ ಪಕ್ಷೇತರ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುತ್ತೇನೆ ಎಂದು ಅನಿಲ್‌ಬೆನಕೆ ಅವರ ಎದುರಿನಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next