Advertisement

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

10:21 PM Dec 24, 2024 | Team Udayavani |

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರಿಗೆ ವಿಧಿಸಿರುವ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ ನೀಡಿದೆ.

Advertisement

ಪ್ರಕರಣ ಸಂಬಂಧ ವಿಚಾರಣ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸತೀಶ್‌ ಸೈಲ್‌ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಯ ಅಂತಿಮ ಇತ್ಯರ್ಥದ ತನಕ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 151ರ ಅನ್ವಯ ಕಾರವಾರ ಕ್ಷೇತ್ರದ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತಿಲ್ಲ. ಅದೇ ರೀತಿ ಸತೀಶ್‌ ಸೈಲ್‌ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ, ಸದನದಲ್ಲಿ ಮತ ಚಲಾಯಿಸುವಂತಿಲ್ಲ ಮತ್ತು ಶಾಸಕನಿಗೆ ಸಿಗುವ ಯಾವುದೇ ವೇತನ-ಭತ್ಯೆಗಳು ಪಡೆಯಲು ಅರ್ಹರಾಗಿಲ್ಲ. ಮೇಲ್ಮನವಿ ಬಾಕಿ ಇರುವಾಗ ಮೇಲ್ಮನವಿದಾರರನ್ನು (ಸತೀಶ್‌ ಸೈಲ್‌) ಭವಿಷ್ಯದಲ್ಲಿ ನಡೆಯುವ ಚುನಾವಣೆಯಲ್ಲಿ ಭಾಗವಹಿಸದಂತೆ ಅನರ್ಹಗೊಳಿಸಬಾರದು ಎಂದೂ ಆದೇಶದಲ್ಲಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next