ಬೈಲಹೊಂಗಲ: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಾಗೂ ನೂತನ ಯೋಜನೆಗಳಿಗೆ 57 ಸಾವಿರ ಕೋಟಿ ಅನುದಾನ ಬಿಡುಗಡೆಗೊಳಿಸಿ ಅವುಗಳ ಅನುಷ್ಠಾನಕ್ಕೆ ದಿ. ಸುರೇಶ ಅಂಗಡಿ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಶುಕ್ರವಾರ ಪಟ್ಟಣದ ಪೃಥ್ವಿ ಗಾರ್ಡನ್‌ದಲ್ಲಿ ನಡೆದ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪ್ರಚಾರ ಸಭೆಯಲ್ಲಿ ಮಾತನಾಡಿ, 900 ಕೋಟಿ ರೂ. ವೆಚ್ಚದ ಬೆಳಗಾವಿ-ಧಾರವಾಡ ರೈಲ್ವೆ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ರಾಜ್ಯ ಸರಕಾರ ಭೂಸ್ವಾ ಧೀನ ಪ್ರಕ್ರಿಯೆ ನಡೆಸಿದೆ. ಪ್ರಯಾಣಿಕರ ಬೇಡಿಕೆಯನುಗುಣವಾಗಿ ಬೆಳಗಾವಿ- ಬೆಂಗಳೂರು ನೇರ ರೈಲ್ವೆ ಕೊಡುಗೆ ಅಂಗಡಿ ಅವರದು. ಕರೊನಾ ಸಂಕಷ್ಟ ಸಮಯದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಉಪಚುನಾವಣೆ ಎದುರಾಗಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಬಿಜೆಪಿ ಅಭ್ಯರ್ಥಿಯನ್ನು ಅತ್ಯಂತ ಬಹುಮತದಿಂದ ಆಯ್ಕೆ ಮಾಡಲು ಶ್ರಮಿಸಬೇಕೆಂದರು.
ಅಧೋಗತಿಗೆ ಹೋಗುತ್ತಿರುವ ಕಾಂಗ್ರೆಸ್ ಪಕ್ಷದಿಂದ ದೇಶದ ಬದಲಾವಣೆ ಕಾಣಲಾಗದು. ಪ್ರಬುದ್ಧತೆಯಿಲ್ಲದ ರಾಹುಲ್ ಗಾಂಧಿ ದಿನದ 24 ಗಂಟೆ ಜನಸೇವೆ ಮಾಡುತ್ತಿರುವ ಮೋದಿಜಿಯವರಿಗೆ ಎಲ್ಲಿಯ ಹೋಲಿಕೆ? ಒಳ ಜಗಳದ ಕಾಂಗ್ರೆಸ್ಸಿಗರು ಟೀಕೆ ಬಿಟ್ಟು ಕೇಂದ್ರದ ಸಾಧನೆ ತಿಳಿದುಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಭಾರತಕ್ಕೆ ಶಾಪವಾಗಿ ಪರಿಣಮಿಸಿದೆ. ಅವರ ದುರಾಡಳಿತ, ಸ್ವಾರ್ಥದಿಂದ ದೇಶ ಅಧೋಗತಿಗೆ ತಲುಪಿತ್ತು. ಬಿಜೆಪಿ ಅಧಿ ಕಾರಕ್ಕೆ ಬಂದ ನಂತರ ಬದಲಾವಣೆ ದೇಶದ ಮೂಲೆ-ಮೂಲೆಗಳಲ್ಲಿ ಕಾಣಸಿಗುತ್ತಿದೆ. ಕಾಂಗ್ರೆಸ್ ಕುಟುಂಬ ರಾಜಕಾರಣವನ್ನು ಮುಂದಿಟ್ಟುಕೊಂಡು ನೆಹರು, ಇಂದಿರಾ ಗಾಂಧಿ , ರಾಜೀವ್ ಗಾಂಧಿ ಪ್ರಧಾನಿಗಳಾಗಿ ಈಗ ರಾಹುಲ್ ಗಾಂಧಿ ಯನ್ನು ಪ್ರಧಾನಿ ಮಾಡಲು ಹೊರಟಿರುವ ಕಾಂಗ್ರೆಸ್ ನೀತಿ ದುರಾದೃಷ್ಟಕರ ಎಂದರು. ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್, ವಿಧಾನಸಭೆ ಉಪಸಭಾಪತಿ ಆನಂದ್ ಮಾಮನಿ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಸುರೇಶ್ ಅಂಗಡಿ ಅವರ ಅಭಿವೃದ್ಧಿಪರ ಕಾರ್ಯವನ್ನು ಮುಂದುವರಿಸಲು ಮಂಗಲಾ ಅಂಗಡಿ ಅವರ ಆಯ್ಕೆ ಮಾಡಲೇಬೇಕು ಎಂದರು.
ಸಚಿವರಾದ ಉಮೇಶ್ ಕತ್ತಿ, ಶಾಸಕರಾದ ಮಹಾದೇವಪ್ಪ ಯಾದವಾಡ, ಅಭಯ್ ಪಾಟೀಲ್, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ್ ಪಾಟೀಲ್, ಲೋಕಸಭಾ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮಾತನಾಡಿದರು. ಸಂಸದರಾದ ಈರಣ್ಣ ಕಡಾಡಿ, ಅಣ್ಣಾ ಸಾಹೇಬ್ ಜೊಲ್ಲೆ, ಶಾಸಕರಾದ ಮಹಾಂತೇಶ ದೊಡ್ಡಗೌಡರ್, ವಿಧಾನಪರಿ?ತ್ ಸದಸ್ಯರಾದ ಮಹಾಂತೇಶ್ ಕವಟಗಿಮಠ, ಮಾಜಿ ಸಚಿವ ಶಶಿಕಾಂತ್ ನಾಯಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ರಾಜ್ಯ ವಕ್ತಾರ ಎಂ.ಬಿ. ಜಿರಲಿ, ಮುಕ್ತಾರ ಪಠಾಣ, ಮಲ್ಲಿಕಾರ್ಜುನ ತುಬಾಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಭಾಷ ಪಾಟೀಲ್, ಸಂದೀಪ್ ದೇಶಪಾಂಡೆ, ಗೂಳಪ್ಪ ಹೊಸಮನಿ, ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನ್ ಮಾಧಮ್ಮನವರ ಜಿಲ್ಲಾ ಮಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡರ, ಗುರು ಮೆಟಗುಡ್, ರತ್ನಾ ಗೋಧಿ , ರುದ್ರಣ್ಣ ಚಂದರಗಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ್ ನೇಸರಗಿ, ಮಲ್ಲಿಕಾರ್ಜುನ ದೇಸಾಯಿ, ಲಕ್ಕಪ್ಪ ಕಾರಗಿ,ಇನ್ನಿತರರು ಇದ್ದರು ಬೆ„ಲಹೊಂಗಲ ಮಂಡಲ ಅಧ್ಯಕ್ಷ ಮಡಿವಾಳಪ್ಪ ಚಳಕೊಪ್ಪ ಸ್ವಾಗತಿಸಿದರು. ಮಲ್ಲಿಕಾರ್ಜುನ ಗೌಡತಿ ನಿರೂಪಿಸಿದರು. ವೀರೇಶ್ ಹಲಕ್ಕಿ ವಂದಿಸಿದರು.