Advertisement
ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದ ಅಪಹರಣಕಾರ ನಿನ್ನನ್ನು ಮನೆಗೆ ಬಿಟ್ಟು ಬರುತ್ತೇನೆ ಬಾ ಎಂದು ಹೆಗಲ ಮೇಲೆ ಎತ್ತಿಕೊಂಡಿದ್ದಾನೆ. ಬಾಲಕಿ ಜೋರಾಗಿ ಕಿರುಚಾಡಿದ್ದಾಳೆ. ಅಪರಿಚಿತ ವ್ಯಕ್ತಿ ಬಾಲಕಿಯನ್ನು ಎತ್ತಿಕೊಂಡು ಸುಮಾರು 50 ಮೀಟರ್ ವರೆಗೆ ಒಯ್ದಿದ್ದಾನೆ. ಬಾಲಕಿ ಕಾಲು ಬಡಿದು ಕೆಳಗೆ ಜಿಗಿದಿದ್ದಾಳೆ. ಬಾಲಕಿಯ ಕಿರುಚಾಟ ಕೇಳಿ ಸುತ್ತಲಿನ ಜನರು ಓಡಿ ಬರುವಷ್ಟರಲ್ಲಿ ಆತ ಅಲ್ಲಿಂದ ಓಡಿ ಹೋಗಿದ್ದಾನೆ.
ಬಂದಿದ್ದರಿಂದ ಬಾಲಕಿ ಬಾಚಾವ್ ಆಗಿದ್ದಾಳೆ. ಈ ಎಲ್ಲ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಕೂಡಲೇ ಟಿಳಕವಾಡಿ ಪೊಲೀಸ್ ಠಾಣೆ ದೂರು ದಾಖಲಾಗಿದೆ. ಈ ಬಗ್ಗೆ ಪಾಲಕರು ಹಾಗೂ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿ, ಅಪರಿಚಿತ ವ್ಯಕ್ತಿಯನ್ನು ಬಂಧಿ ಸುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿ ಬಂಧನಕ್ಕೆ ಜಾಲ ಬೀಸಿದ್ದಾರೆ. ಆರೋಪಿಯ ಶೋಧಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ. ಆರೋಪಿಯ ಸುಳಿವು ಸಿಕ್ಕಿದ್ದು, ಆತನ ಬಂಧನಕ್ಕಾಗಿ ಮಾಹಿತಿ
ಪಡೆದುಕೊಂಡಿದ್ದಾರೆ.
Related Articles
Advertisement
ಹಾಡಹಗಲೇ ಬೆಳಗಾವಿ ನಗರದ ಹೃದಯಭಾಗದಲ್ಲಿ ಇಂಥ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಮಕ್ಕಳ ಅಪಹರಣಕಾರರು ನಗರದಲ್ಲಿ ಬಾಲ ಬಿಚ್ಚಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಪೊಲೀಸರು ಇಂಥ ಚಟುವಟಿಕೆಗಳ ಮೇಲೆ ನಿಗಾ ಇಟ್ಟು ಸಂಶಯಾಸ್ಪದವಾಗಿ ಓಡಾಡುವವರನ್ನು ಬಂ ಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.