Advertisement
ಮಂಗಳವಾರ ಉಭಯ ಸದನಗಳಲ್ಲೂ ಮಹಾರಾಷ್ಟ್ರದ ಆಟಾಟೋಪ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಿಲುವಳಿ ಸೂಚನೆ ಮಂಡಿಸಿವೆ.
ವಿಷಯ ಪ್ರಸ್ತಾವಿಸಿದ ಸಿದ್ದರಾಮಯ್ಯ, ಮಹಾಜನ್ ವರದಿಯನ್ನು ನಾವು ಒಪ್ಪಿಕೊಂಡಿರುವುದರಿಂದ ಈಗಾಗಲೇ ಇದು ಮುಗಿದ ಅಧ್ಯಾಯ. ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವುದರಿಂದ ಈ ವಿಷಯವನ್ನು ಜೀವಂತವಾಗಿಡುವ ಯತ್ನ ನಡೆಯುತ್ತಿದೆ ಎಂದರು.
Related Articles
Advertisement
ಬೆಳಗಾವಿ ಅಧಿವೇಶನದ ಸಂದರ್ಭ ದಲ್ಲಿ ಮಹಾ ಮೇಳವ್, ನ.1ರಂದು ಬ್ಲಾಕ್ ಡೇ ಆಚರಣೆಯಂಥ ಕುಟಿಲ ಪ್ರಯತ್ನಗಳಿಗೆ ಸೊಪ್ಪು ಹಾಕಬಾರದು. ರಾಜ್ಯ ಸರಕಾರ ಗಟ್ಟಿ ನಿಲುವು ತಾಳಬೇಕು ಎಂದು ಹೇಳಿದರು.
ಕೇಂದ್ರ ಸರಕಾರ ಸಂಧಾನಕ್ಕೆ ಕರೆದಾಗ ಹೋಗುವ ಮೊದಲು ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದು, ನಮ್ಮ ನಿಲುವುಗಳನ್ನು ಕೇಳಬೇಕಿತ್ತು. ಅದನ್ನು ಮಾಡದೇ ದಿಲ್ಲಿಗೆ ಹೋಗಿ, ಗಡಿ ವಿಷಯವಾಗಿ ಸಚಿವರ ಸಮಿತಿ ರಚಿಸಲು ನಿರ್ಧರಿಸಿರುವುದು ಸರಿಯಲ್ಲ. ಹಾಗಾದರೆ ರಾಜ್ಯದಲ್ಲಿ ಗೃಹ ಸಚಿವರು ಸಮರ್ಥರಿಲ್ಲವೇ ಎಂದರು.
ನಮ್ಮ ನಿಲುವು ಸ್ಪಷ್ಟಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಸರಕಾರದ ನಿಲುವು ಸ್ಪಷ್ಟ. ಉತ್ತರ ಕರ್ನಾಟಕ ಭಾಗದವನಾಗಿ, ಮುಖ್ಯಮಂತ್ರಿಯಾಗಿ ಜವಾಬ್ದಾರಿಯೂ ಇದೆ, ಸತ್ಯವನ್ನೇ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಗಡಿಯಲ್ಲಿ ಕನ್ನಡಿಗರಿಗೆ ಸಮಸ್ಯೆಯಾಗಲು ಅವಕಾಶ ನೀಡುವುದಿಲ್ಲ. ಮಹಾಮೇಳವ್ ನಡೆಯಲು ಬಿಟ್ಟಿಲ್ಲ, ಮಹಾರಾಷ್ಟ್ರ ಸಚಿವರು ಬರುವುದನ್ನು ತಡೆದಿದ್ದೇವೆ. ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಕಾರ್ಯದರ್ಶಿ ಮಹಾರಾಷ್ಟ್ರ ಸರಕಾರಕ್ಕೆ ಬರೆದಿರುವ ಪತ್ರವು ಗಡಿ ವಿಷಯ ನಿರ್ಣಯಕ್ಕೆ ಮುಂದೆ ಬಹು ಮಹತ್ವದ ದಾಖಲೆಯಾಗಲಿದೆ ಎಂದು ಹೇಳಿದರು. ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ಜೆಡಿಎಸ್‌ನ ತಿಪ್ಪೇಸ್ವಾಮಿ, ಗಡಿ ಸಂಗತಿ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಈ ವಿಷಯ ಚರ್ಚೆ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಸಭಾಪತಿ ರಘುನಾಥ ರಾವ್ ಮೆಲ್ಕಾಪುರೆ ಹೇಳಿದರು. ಉದಯವಾಣಿ ಪ್ರಸ್ತಾವ
ವಿಧಾನಸಭೆಯಲ್ಲಿ ವಿಪಕ್ಷ ಉಪ ನಾಯಕ ಯು.ಟಿ. ಖಾದರ್, ಉದಯವಾಣಿ ಪತ್ರಿಕೆಯನ್ನು ಪ್ರದರ್ಶಿಸಿ ಗಡಿಯಲ್ಲಿ ಮಹಾರಾಷ್ಟ್ರ ಪುಂಡಾಟಿಕೆ ನಡೆಸುತ್ತಿರುವ ಬಗ್ಗೆ ಪ್ರಸ್ತಾವಿಸಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.