ಬೆಳಗಾವಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗಳ ಕಾರ್ಯಾಚರಣೆ ಸೋಮವಾರ (ಡಿ.14) ಬೆಳಗ್ಗೆ ಪೊಲೀಸ್ ಭದ್ರತೆ ಮಧ್ಯೆ ಪುನರಾರಂಭಿಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ. ಕೆ. ತ್ಯಾಗರಾಜನ್, ಎಸ್ ಪಿ ಲಕ್ಷ್ಮಣ ನಿಂಬರಗಿ ಸೋಮವಾರ ಬೆಳಗ್ಗೆ ಬಸ್ ನಿಲ್ದಾಣಕ್ಕೆ ಬಂದು ಕೆಲವು ನೌಕರರು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ನಿಲ್ದಾಣದಿಂದ ಹೊರಡುತ್ತಿರುವ ಬಸ್ ಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಹಿರಿಯ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿ ಖುದ್ದಾಗಿ ನಿಂತು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿಯಿಂದ ಬೇರೆ ಬೇರೆ ಜಿಲ್ಲೆಗಳು ಹಾಗೂ ಅಂತರರಾಜ್ಯ ಬಸ್ ಸೇವೆ ಆರಂಭಗೊಂಡಿದ್ದು, ಪ್ರಯಾಣಿಕರು ಎಂದಿನಂತೆ ಕೇಂದ್ರ ಬಸ್ ನಿಲ್ದಾಣದಲ್ಲಿ ಕಂಡುಬರುತ್ತಿದ್ದಾರೆ.
ಇದನ್ನೂ ಓದಿ: ಪುಷ್ಪಗಿರಿ ತಪ್ಪಲಿನಲ್ಲೂ ಭಾರೀ ಶಬ್ಧ-ಕಂಪನ ವಿಸ್ತರಣೆ: ಮುಂದುವರೆದ ಕುತೂಹಲ !
ಪ್ರಯಾಣಿಕರು ಆತಂಕವಿಲ್ಲದೆ ಬಸ್ ಗಳಲ್ಲಿ ಪ್ರಯಾಣಿಸಬಹುದು. ಪೊಲೀಸ್ ಎಸ್ಕಾರ್ಟ್ ನಲ್ಲಿ ಬಸ್ ಗಳು ಹೊರಡುತ್ತಿವೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಭದ್ರತೆ ನೀಡಲಿದ್ದಾರೆ ಎಂದು ಈ ವೇಳೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಕೆಲವೆಡೆ ಬಸ್ ಸಂಚಾರ ಆರಂಭ, ಮುಂದುವರೆದ ಪ್ರಯಾಣಿಕರ ಪರದಾಟ