Advertisement

ಬೆಳಗಾವಿ: ಖಾಸಗಿ ತರಕಾರಿ ಮಾರುಕಟ್ಟೆ ರದ್ದುಗೊಳಿಸಲು ಒತ್ತಾಯ

06:22 PM Jul 08, 2023 | Team Udayavani |

ಬೆಳಗಾವಿ: ನಗರದಲ್ಲಿರುವ ನಿರ್ಮಾಣಗೊಂಡಿರುವ ಕಾನೂನು ಬಾಹಿರ ಖಾಸಗಿ ತರಕಾರಿ ಮಾರುಕಟ್ಟೆ ರದ್ದುಗೊಳಿಸಿ ಕೃಷಿ
ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮಾರುಕಟ್ಟೆ ಆರಂಭಿಸುವಂತೆ ಆಗ್ರಹಿಸಿ ಎಪಿಎಂಸಿ ತರಕಾರಿ ವ್ಯಾಪಾರಿಗಳ ಸಂಘಟನೆ ವತಿಯಿಂದ ಶುಕ್ರವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.

Advertisement

ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರು ಬಳಿಕ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ
ಹಾಗೂ ಮೇಯರ್‌ ಶೋಭಾ ಸೋಮನಾಚೆ ಅವರಿಗೆ ಮನವಿ ಸಲ್ಲಿಸಿದರು.

ಸದ್ಯ ಬೆಳಗಾವಿ ನಗರದಲ್ಲಿರುವ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರವಾಗಿ ಹಿಂದಿನ ಸರ್ಕಾರದ ಅವಧಿಯಲ್ಲಿ
ನಿರ್ಮಾಣಗೊಂಡಿದೆ. ಈ ಕಟ್ಟಡ ನಿರ್ಮಾಣಕ್ಕೆ 2015ರಲ್ಲಿ ಕಟ್ಟಡ ನಿರ್ಮಾಣಕ್ಕೆ 321 ಕಾಯ್ದೆ ಪ್ರಕಾರ ಅನುಮತಿ ಇಲ್ಲದ್ದಕ್ಕೆ ತಡೆಯಾಜ್ಞೆ ನೀಡಲಾಗಿತ್ತು. ಆದರೆ ಕಟ್ಟಡ ನಿರ್ಮಾಣಕ್ಕೆ ಕಾನೂನು ಬಾಹಿರವಾಗಿ ಅನುಮತಿ ನೀಡಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ಖಾಸಗಿ ತರಕಾರಿ ಮಾರುಕಟ್ಟೆಗೆ ರಾಜಕೀಯ ಪ್ರಭಾವ ಬಹಳಷ್ಟಿದೆ. ರಾಜಕೀಯ ಹಸ್ತಕ್ಷೇಪದಿಂದ ಈ ಕಟ್ಟಡ ನಿರ್ಮಿಸಲಾಗಿದೆ. ಈ ಬಗ್ಗೆ ಹಲವಾರು ಬಾರಿ ನಾವು ಕಟ್ಟಡ ನಿರ್ಮಾಣದ ಬಗ್ಗೆ ಮಾಹಿತಿ ಕೇಳಿದರೂ ಕೊಡುತ್ತಿಲ್ಲ. ಖಾಸಗಿ ಮಾರುಕಟ್ಟೆಯಲ್ಲಿ ಮುಕ್ತ ಮಾರುಕಟ್ಟೆಗೆ ಅವಕಾಶವಿಲ್ಲ. ಸ್ವಾರ್ಥಕ್ಕಾಗಿ ಬಂಡವಾಳಶಾಹಿಗಳು ಮಾತ್ರ ವ್ಯಾಪಾರ
ನಡೆಸುತ್ತಿದ್ದಾರೆ. ರೈತರ ಮೇಲೆ ಶೋಷಣೆ ನಡೆದಿದೆ. ಹೀಗಾಗಿ ಈಗಿನ ರಾಜ್ಯ ಸರ್ಕಾರ ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ
ಕಾಯ್ದೆ ತಿದ್ದುಪಡಿ ಮಾಡಿ ರದ್ದುಗೊಳಿಸಿದೆ.

ಕೂಡಲೇ ಎಪಿಎಂಸಿ ಆವರಣದಲ್ಲಿ ತರಕಾರಿ ಮಾರುಕಟ್ಟೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ಗಜಾನನ ಶಹಾಪುರಕರ, ಸದಾನಂದ ಹುಂಕರಿಪಾಟೀಲ, ಬಸನಗೌಡ ಪಾಟೀಲ, ಸತೀಶ ಪಾಟೀಲ, ವಿನೋದ ರಾಜಗೋಳಕರ, ಆಸೀಫ್‌ ಕಲಮನಿ, ಸಂದೀಪ ಅಂಬೋಜಿ, ಜಾವೇದ್‌ ಸನದಿ, ಸುರೇಶ ಮೋದಗೇಕರ ಸೇರಿದಂತೆ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next