Advertisement

ಬೆಳಗಾವಿ: 26, 27ರಂದು ಸಿರಿಧಾನ್ಯ-ಸಾವಯವ ಮೇಳ

05:55 PM Jan 24, 2023 | Team Udayavani |

ಬೆಳಗಾವಿ: 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜ. 26 ಹಾಗೂ 27ರಂದು ಸಿರಿಧಾನ್ಯ ಮತ್ತು ಸಾವಯುವ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ನಿತೇಶ ಪಾಟೀಲ ತಿಳಿಸಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರದ ಸರದಾರ ಹೈಸ್ಕೂಲ್‌ ಮೈದಾನದಲ್ಲಿ ಜ.26 ಹಾಗೂ 27 ರಂದು ಸಿರಿಧಾನ್ಯ ಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜ.26ರಂದು ಬೆಳಗ್ಗೆ 11 ಗಂಟೆಗೆ ಸಿರಿಧಾನ್ಯ ಹಾಗೂ ಸಾವಯವ ಮೇಳ ಉದ್ಘಾಟಿಸಲಿದ್ದಾರೆ. ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸುವರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ಆಶ್ರಯದಲ್ಲಿ ಮೇಳ ಆಯೋಜಿಸಲಾಗಿದೆ ಎಂದರು.

ಸಿರಿಧಾನ್ಯ ಹಾಗೂ ಸಾವಯವ ಮೇಳದ ಪ್ರಚಾರಸಾಮಗ್ರಿಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಬಿಡುಗಡೆಗೊಳಿಸಿದರು. ಜಿಪಂ ಸಿಇಒ ದರ್ಶನ್‌ ಎಚ್‌ .ವಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಉಪ ಕೃಷಿ ನಿರ್ದೇಶಕ ಎಸ್‌.ಬಿ. ಕೊಂಗವಾಡ, ಹೂಗಾರ, ಚಿಕ್ಕೋಡಿಯ ಕೃಷಿ ಉಪ ನಿರ್ದೇಶಕ ಎಲ್‌ .ಐ. ರೂಢಗಿ ಸುದ್ದಿಗೋಷ್ಠಿಯಲ್ಲಿದ್ದರು.

ಸಿರಿಧಾನ್ಯ ನಡಿಗೆ ಹಾಗೂ ಸೈಕಲ್‌ ಜಾಥಾ ಮೇಳದ ನಿಮಿತ್ತ ಮಂಗಳವಾರ ಜ. 24ರ ಬೆಳಗ್ಗೆ 6:30 ಗಂಟೆಗೆ ನಗರದ ಚನ್ನಮ್ಮ ವೃತ್ತದಿಂದ ಸಿರಿಧಾನ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ಸೆ„ಕಲ್‌ ಜಾಥಾ ನಡೆಯಲಿದೆ. ವಿದ್ಯಾರ್ಥಿಗಳು, ವೈದ್ಯರು, ನ್ಯಾಯವಾದಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ವಿವರಿಸಿದರು.

ಇತ್ತೀಚಿನ ದಿನಗಳಲ್ಲಿ ಜಂಕ್‌ ಫುಡ್‌ ಸೇವನೆಯಿಂದಾಗಿ ಜನ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸಿರಿಧಾನ್ಯಗಳಾದ ನವಣೆ, ಕೊರಲೆ, ಊದಲು, ಹಾರಕ, ಬರಗು, ರಾಗಿ, ಸಜ್ಜೆ ಮತ್ತು ಜೋಳದಿಂದ ತಯಾರಿಸಿದ ಆಹಾರಗಳನ್ನು ಸೇವಿಸಿದಾಗ ಮನುಷ್ಯ ಸದೃಢವಾಗಿ, ಸಶಕ್ತವಾಗಿ ಮತ್ತು ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ. ಹೀಗಾಗಿ ಸಿರಿಧಾನ್ಯ ಮತ್ತು ಸಾವಯವ ಆಹಾರ ಧಾನ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಉದ್ದೇಶದಿಂದ ಎರಡು ದಿನಗಳ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.

Advertisement

ಸಿರಿಧಾನ್ಯ ಮೇಳದ ವೈಶಿಷ್ಟ್ಯಗಳು
*ಎರಡು ದಿನಗಳ ಮೇಳದಲ್ಲಿ 75ರಿಂದ 80 ವಸ್ತು ಪ್ರದರ್ಶನ ಮಳಿಗೆಗಳನ್ನು ಹಾಕಲಾಗುವುದು. ಅಲ್ಲಿ ಸಿರಿಧಾನ್ಯ ಮತ್ತು ಸಾವಯವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.

*ಸಿರಿಧಾನ್ಯಗಳಿಂದ ತಯಾರಿಸಿದ ಆಹಾರಗಳ ಸ್ಪರ್ಧೆ; ಪಿ.ಎಂ.ಎಫ್‌. ಎಂ.ಇ. ಯೋಜನೆಯ ಫಲಾನುಭವಿಗಳ ಯಶೋಗಾಥೆಯೊಂದಿಗೆ ಅವರು ತಯಾರಿಸಿದ ಉತ್ಪನ್ನಗಳ ಮಾರಾಟ ಮಳಿಗೆಗಳು ಇರಲಿವೆ.

*ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ”ಕೃಷಿ ಜ್ಞಾನ ಭಂಡಾರ” ಎಂಬ ವಿಶೇಷ ಮಳಿಗೆಯನ್ನು ಹಾಕಿ ಅದರಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿಸಿದ ಮಾದರಿಗಳನ್ನು ಬಿತ್ತರಿಸಲಾಗುವುದು. ಕೃಷಿಯಲ್ಲಿ ಡ್ರೋಣ್‌ ಬಳಕೆಯ ಪ್ರಾತ್ಯಕ್ಷಿಕೆ ನೀಡಲಾಗುವುದು.

*ರೈತರಿಗೆ ಸಿರಿಧಾನ್ಯ, ಸಾವಯವ, ಆಹಾರದಲ್ಲಿ ಆರೋಗ್ಯ ಮತ್ತು ಮಣ್ಣಿನ ಆರೋಗ್ಯ ಹಾಗೂ ಇನ್ನಿತರ ವಿಷಯಗಳ ಕುರಿತು ಕೃಷಿ ವಿಶ್ವವಿದ್ಯಾಲಯ, ಧಾರವಾಡದ ವಿಜ್ಞಾನಿಗಳಿಂದ ಹಾಗೂ ಪ್ರಗತಿಪರ ರೈತರಿಂದ ವಿಷಯ ಮಂಡನೆ ಮತ್ತು ರೈತರೊಂದಿಗೆ ಚರ್ಚಾಗೋಷ್ಠಿ ನಡೆಸಲಾಗುವುದು. ಇದರೊಂದಿಗೆ ಜ. 26ರಂದು ಸಂಜೆ ಸಾಂಸ್ಕೃತಿಕ ಮೇಳವನ್ನೂ ಹಮ್ಮಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next