Advertisement
ಸುದ್ದಿಗಾರರ ಜತೆ ಮಾತನಾಡಿ, ನನ್ನ ಮೇಲೆ ಯಾರ್ಯಾರು ಕೊಲೆ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಈಗಾಗಲೇ ದೂರು ನೀಡಲಾಗಿದೆ. ಎಫ್‌ಐಆರ್ ಆಗಿಲ್ಲ. ಕೊಲೆ ಪ್ರಯತ್ನ, ಅದಕ್ಕೆ ಕುಮ್ಮಕ್ಕು ಕೊಟ್ಟವರನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ “ಬೆಳಗಾವಿ ಚಲೋ’ ಮಾಡೋಣವೆಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ ಎಂದರು.
ಚಿಕ್ಕಮಗಳೂರಿಗೆ ಶನಿವಾರ ರಾತ್ರಿ ಆಗಮಿಸಿದ ಸಿ.ಟಿ. ರವಿ ಅವರು ರವಿವಾರ ಪತ್ನಿಯೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ರವಿ ಅವರ ಬಿಡುಗಡೆಗೆ ಪ್ರಾರ್ಥಿಸಿ ಹಲವರು ಹರಕೆ ಹೊತ್ತಿದ್ದರು. ಸ್ವಾಗತ ವೇಳೆ ಆ್ಯಂಬುಲೆನ್ಸ್ ಬಳಕೆ: ದೂರು
ಚಿಕ್ಕಮಗಳೂರು: ಸಿ.ಟಿ. ರವಿ ಶನಿವಾರ ತಡರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಸ್ವಾಗತ ಸಂದರ್ಭ ಬಿಜೆಪಿ ಮುಖಂಡನ ಮಾಲಕತ್ವದ 7 ಆ್ಯಂಬುಲೆನ್ಸ್‌ಗಳನ್ನು ಬಳಸಲಾಗಿತ್ತು. ರೋಗಿಗಳಿಲ್ಲದೆ ಆ್ಯಂಬುಲೆನ್ಸ್ ಸೈರನ್, ಲೈಟ್ ಬಳಕೆ ಮಾಡಿದ್ದು ಕಾನೂನು ಬಾಹಿರ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.