Advertisement

ಅತಿಥಿ ಉಪನ್ಯಾಸಕರಿಂದ ನಾಳೆ ಬೆಳಗಾವಿ ಚಲೋ

06:50 AM Dec 11, 2018 | Team Udayavani |

ಹುಬ್ಬಳ್ಳಿ: ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕಾಯಂ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.12ರಂದು ಅತಿಥಿ ಉಪನ್ಯಾಸಕರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಪ್ರೊ| ಹನುಮಂತಗೌಡ ಕಲ್ಮನಿ, ರಾಜ್ಯದ 412 ಪ್ರಥಮ ಕಾಲೇಜುಗಳಲ್ಲಿ ಸುಮಾರು 13 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 15-20 ವರ್ಷಗಳಿಂದ ಯಾವುದೇ ಸೇವಾ ಭದ್ರತೆಯಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕುರಿತು ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.

ಅತಿಥಿ ಉಪನ್ಯಾಸಕ ಎಂಬ ತಾತ್ಕಾಲಿಕ ಹಾಗೂ ಅವೈಜ್ಞಾನಿಕ ಪದ್ಧತಿ ಉನ್ನತ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಗೌರವಧನ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ವರ್ಷದಲ್ಲಿ 10 ತಿಂಗಳು ಮಾತ್ರ ಗೌರವಧನ ದೊರೆಯುತ್ತಿರುವುದರಿಂದ ಅತಿಥಿ ಉಪನ್ಯಾಸಕರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಜರ್ಜರಿತರಾಗುತ್ತಿದ್ದಾರೆ. ಈ ಎಲ್ಲಾ ಕಾರಣಗಳು ಉನ್ನತ ಶಿಕ್ಷಣ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಬೆಂಗಳೂರಿನಲ್ಲಿ ಹಿಂದೆ ನಡೆದ ಧರಣಿಯಲ್ಲಿ ಕುಮಾರಸ್ವಾಮಿ ಅವರು ಪಾಲ್ಗೊಂಡು, ಆಡಳಿತಕ್ಕೆ ಬಂದರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇತ್ತೀಚೆಗೆ ಒಂದು ಸಭೆ ಕೂಡ ನಡೆದಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಿಂದಿನ ಸರಕಾರಗಳು ಇದೇ ರೀತಿ ಭರವಸೆ ನೀಡುತ್ತಲೇ ನಮಗೆ ವಂಚಿಸಿವೆ. ಹೀಗಾಗಿ, ಕುಮಾರಸ್ವಾಮಿ ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳಕೊಳ್ಳಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next