ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಪಡೆಯುವ ಮೂಲಕ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಈ ಸಂಬಂಧ ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು. ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ ಮೂಲಕ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಗಳು
ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಇ.ವಿ ರಮಣರೆಡ್ಡಿ ಹೇಳಿದರು.
Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಸುಧಾರಣೆಗಳೊಂದಿಗೆ ದೇಶದ ತಳಮಟ್ಟವನ್ನು ತಲುಪಲು ಮತ್ತು ಪ್ರತಿಯೊಬ್ಬರನ್ನು ಸಬಲೀಕರಣಗೊಳಿಸುವ ಸಲುವಾಗಿ, ಕೌಶಲ್ಯ ಅಭಿವೃದ್ಧಿ ಅವಕಾಶಗಳಿಗಾಗಿ ವ್ಯವಸ್ಥೆಯನ್ನು ಬಲಪಡಿಸಲು ಜಿಲ್ಲಾ ಮಟ್ಟದಲ್ಲಿ ಕೌಶಲ್ಯ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದರು.
ಎದುರಾಗುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ವಿವಿಧ ಕಂಪನಿಗಳ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
Related Articles
ಹೆಚ್ಚಾಗಿದ್ದು, ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆ ತರಬೇತಿ ನೀಡಲಾಗುತ್ತಿದೆ. ಈ ಭಾಗದಲ್ಲಿ ಕಾಡು ಜೇನು ಹಾಗೂ ಪೆಟ್ಟಿಗೆ ಮೂಲಕ ಜೇನು ಸಾಕಾಣಿಕೆ ಮಾಡಿ ಮಾರಾಟ ಮಾಡಲಾಗುತ್ತಿದೆ. ಇದೆ ಮಾದರಿಯಲ್ಲಿ ಯುವಕರಿಗೆ ತರಬೇತಿ ನೀಡಬೇಕು ಎಂದು ಹೇಳಿದರು.
Advertisement
ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ನಿರ್ವಾಹಕ ನಿರ್ದೇಶಕ ನವಾಜ್ ಮಾತನಾಡಿ, ಜಿಲ್ಲಾ ಕೌಶಲ್ಯಾಭಿವೃದ್ಧಿಸಮಿತಿಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಉದ್ಯಮದಾರರು ಸದಸ್ಯರಾಗಿದ್ದಾರೆ. ಅದೇ
ರೀತಿ ಕೃಷಿ ಇಲಾಖೆಯ ಉಪ ಸಮಿತಿಗಳನ್ನು ಸಹ ರಚಿಸಬಹುದಾಗಿದೆ ಎಂದರು. ಕೇಂದ್ರ ಸರ್ಕಾರದ ಸಂಕಲ್ಪ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಕಲಿಕೆ ಜೊತೆ ಕೌಶಲ್ಯ ಯೋಜನೆಯ ಮೂಲಕ 8ರಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ವಾರದ ಒಂದು ದಿನ ಎಲ್ಲ ಕ್ಷೇತ್ರಗಳಲ್ಲಿನ ವೃತ್ತಿಪರ ತರಬೇತಿ ನೀಡಬಹುದು. ಅದೇ ರೀತಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕ್ರೆಡಿಟ್ ಬೇಸ್ ಕೋರ್ಸ್ ಮೂಲಕ ತರಬೇತಿ ನೀಡಬೇಕು. ಇದಕ್ಕೆ ಬೇಕಾದ ಅನುದಾನವನ್ನು ನೀಡಲಾಗುವುದು ಎಂದು ಅವರು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಮಟ್ಟದಲ್ಲಿ ಸಭೆಗಳನ್ನು ನಡೆಸಬೇಕು. ವಿವಿಧ ಇಲಾಖೆಯ ಉಪ ಸಮಿತಿಗಳನ್ನು ರಚಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ನಿರಂತರ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು. ಸ್ಥಳೀಯ ತರಬೇತುದಾರರು, ಸಂಪನ್ಮೂಲ ವ್ಯಕ್ತಿಗಳು, ಎನ್‌ಜಿಒ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ್ ಮೀನಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್ ಪೈ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಶೀದ್ ಮಿರಜನ್ನವರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ವ್ಯವಸ್ಥಾಪಕ ಡಾ. ಸಂಜೀವ ತಿಗಣಿ ಉಪಸ್ಥಿತರಿದ್ದರು.