ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಖುದ್ದಾಗಿ ಸಮಸ್ಯೆ ಆಲಿಸಿ ಪರಿಹರಿಸುವ ವಿನೂತನ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳಕರ ಆರಂಭಿಸಿದ್ದಾರೆ.
Advertisement
ನಂದಿಹಳ್ಳಿ ಗ್ರಾಮಕ್ಕೆ ಸೋಮವಾರ ತೆರಳಿದ ಸಚಿವರು ಜನರ ಅಹವಾಲುಗಳನ್ನು ಆಲಿಸಿದರು. ಈ ವಾರ ಪೂರ್ತಿ ಹಳ್ಳಿ ಭೇಟಿಮುಂದುವರಿಸಲಿರುವ ಅವರು, ಜನರ ಮನೆ ಬಾಗಿಲಿಗೆ ಸಚಿವರು ತೆರಳಿ ಸಮಸ್ಯೆ ಕೇಳುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಸಚಿವರ ಮನೆ ಬಾಗಿಲಿಗೆ ಜನರು ಸಮಸ್ಯೆ ಹೊತ್ತು ಬರುವುದನ್ನು ತಪ್ಪಿಸಲು ಸಚಿವರೇ ಜನರ ಮನೆ ಬಾಗಿಲಿನತ್ತ ಹೆಜ್ಜೆ ಹಾಕುತ್ತಿರುವುದಕ್ಕೆ ಕ್ಷೇತ್ರದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Related Articles
ರಾಮದಾಸ್ ಜಾಧವ, ಸಂಜೀವ ಮಾದರ, ಮಲ್ಲಿಕಾರ್ಜುನ ಲೋಕುರ, ಮಾರುತಿ ಲೋಕುರ, ಗಣಪತಿ ಜಾಧವ, ಅಶೋಕ ಜಾಧವ, ಪರಶುರಾಮ ಜಂಗಳೆ, ನಿಂಗಪ್ಪ ಹಂಪಣ್ಣವರ, ನೀಲವ್ವ ಬಾಚೂಕರ, ರೇಖಾ ಮಾದರ, ಯಲ್ಲಪ್ಪ ಹಗೆದಾಳ, ವಸಂತ ಗೋರೆ, ಡಾ. ಕಿರಣ ಲೋಂಡೆ ಇತರರು ಇದ್ದರು.
Advertisement
ನಂತರ ಗ್ರಾಮದ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿ, ಮೂಲ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ಸಚಿವರು, ಅಹವಾಲು ಸ್ವೀಕರಿಸಿದರು. ಜನಸ್ಪಂದನೆ ಮೂಲಕ ಜನರ ಸಂಕಷ್ಟಗಳನ್ನು ಆಲಿಸುವುದು ನನ್ನ ಕರ್ತವ್ಯ, ಮನವಿ ಸ್ವೀಕರಿಸಿ ಪರಿಹಾರ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.