Advertisement

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ನಡೆ ಹಳ್ಳಿ ಕಡೆಗೆ

03:44 PM Sep 10, 2024 | Team Udayavani |

■ ಉದಯವಾಣಿ ಸಮಾಚಾರ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಖುದ್ದಾಗಿ ಸಮಸ್ಯೆ ಆಲಿಸಿ ಪರಿಹರಿಸುವ ವಿನೂತನ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳಕರ ಆರಂಭಿಸಿದ್ದಾರೆ.

Advertisement

ನಂದಿಹಳ್ಳಿ ಗ್ರಾಮಕ್ಕೆ ಸೋಮವಾರ ತೆರಳಿದ ಸಚಿವರು ಜನರ ಅಹವಾಲುಗಳನ್ನು ಆಲಿಸಿದರು. ಈ ವಾರ ಪೂರ್ತಿ ಹಳ್ಳಿ ಭೇಟಿ
ಮುಂದುವರಿಸಲಿರುವ ಅವರು, ಜನರ ಮನೆ ಬಾಗಿಲಿಗೆ ಸಚಿವರು ತೆರಳಿ ಸಮಸ್ಯೆ ಕೇಳುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಸಚಿವರ ಮನೆ ಬಾಗಿಲಿಗೆ ಜನರು ಸಮಸ್ಯೆ ಹೊತ್ತು ಬರುವುದನ್ನು ತಪ್ಪಿಸಲು ಸಚಿವರೇ ಜನರ ಮನೆ ಬಾಗಿಲಿನತ್ತ ಹೆಜ್ಜೆ ಹಾಕುತ್ತಿರುವುದಕ್ಕೆ ಕ್ಷೇತ್ರದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನಂದಿಹಳ್ಳಿಯಲ್ಲಿ ಜನರ ಸಮಸ್ಯೆ ಆಲಿಸಿ ಮಾತನಾಡಿದ ಸಚಿವೆ ಹೆಬ್ಬಾಳಕರ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಲೆಗಳಲ್ಲಿ ಕೊಠಡಿಗಳ ನಿರ್ಮಾಣಕ್ಕೆ 5 ಕೋಟಿ ರೂ. ಮೀಸಲಿಡಲಾಗುತ್ತಿದೆ. ಶಾಲೆಗಳ ಅಭಿವೃದ್ಧಿಯೇ ನನ್ನ ಗುರಿ. ಇದರಲ್ಲಿ ಯಾವುದೇ ರಾಜಕೀಯ ಮಾಡಬಾರದು. ಶಾಲೆಗೆ ಅಗತ್ಯವಿರುವ ಅತಿಥಿ ಶಿಕ್ಷಕರ ನೇಮಕ ಮಾಡಲು ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಗ್ರಾಮಗಳ ಅಭಿವೃದ್ಧಿ ಸೇರಿದಂತೆ ಸರ್ವಜನಾಂಗಗಳ ಏಳ್ಗೆಗಾಗಿ ಹಗಲಿರುಳು ಶ್ರಮಿಸಲು ಬದ್ಧನಿದ್ದೇನೆ. ಮರಾಠಿ ಶಾಲೆಗಳ ಅಭಿವೃದ್ಧಿಗೂ ಬದ್ಧಳಾಗಿದ್ದೇನೆ ಎಂದು ಸಚಿವೆ ಹೆಬ್ಟಾಳಕರ ತಿಳಿಸಿದರು.

ಮುಖಂಡರಾದ ಯುವರಾಜ ಕದಂ, ರೇಖಾ ಶಿಂಗೆನ್ನವರ, ಮಹಾದೇವ ಜಾಧವ, ಶಶಿಕಾಂತ ಪಾಟೀಲ, ಸಹದೇವ ಬೆಳಗಾಂವಕರ,
ರಾಮದಾಸ್‌ ಜಾಧವ, ಸಂಜೀವ ಮಾದರ, ಮಲ್ಲಿಕಾರ್ಜುನ ಲೋಕುರ, ಮಾರುತಿ ಲೋಕುರ, ಗಣಪತಿ ಜಾಧವ, ಅಶೋಕ ಜಾಧವ, ಪರಶುರಾಮ ಜಂಗಳೆ, ನಿಂಗಪ್ಪ ಹಂಪಣ್ಣವರ, ನೀಲವ್ವ ಬಾಚೂಕರ, ರೇಖಾ ಮಾದರ, ಯಲ್ಲಪ್ಪ ಹಗೆದಾಳ, ವಸಂತ ಗೋರೆ, ಡಾ. ಕಿರಣ ಲೋಂಡೆ ಇತರರು ಇದ್ದರು.

Advertisement

ನಂತರ ಗ್ರಾಮದ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿ, ಮೂಲ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ಸಚಿವರು, ಅಹವಾಲು ಸ್ವೀಕರಿಸಿದರು. ಜನಸ್ಪಂದನೆ ಮೂಲಕ ಜನರ ಸಂಕಷ್ಟಗಳನ್ನು ಆಲಿಸುವುದು ನನ್ನ ಕರ್ತವ್ಯ, ಮನವಿ ಸ್ವೀಕರಿಸಿ ಪರಿಹಾರ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next