Advertisement

ಬೆಳಗಾವಿ : 9 ಪ್ರಮುಖ ದೇವಸ್ಥಾನಗಳಿಗೆ ಸಾರ್ವಜನಿಕ ಪ್ರವೇಶ ನಿಷೇಧ

08:16 PM Jan 06, 2022 | Team Udayavani |

ಬೆಳಗಾವಿ : ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಒಂಬತ್ತು ಪ್ರಮುಖ ದೇವಸ್ಥಾನಗಳನ್ನು ಮುಂದಿನ ಆದೇಶದವರೆಗೆ ಸಾರ್ವಜನಿಕ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿ ಗಳು ಆದೇಶ ಹೊರಡಿಸಿದ್ದಾರೆ.

Advertisement

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ,ಚಿಂಚಲಿ ಮಾಯಕ್ಕ, ರಾಮದುರ್ಗದ ವೀರಭದ್ರೇಶ್ವರ, ಸವದತ್ತಿಯ ಜೋಗುಳಭಾವಿ ದೇವಸ್ಥಾನ, ಹುಕ್ಕೇರಿ ಯ ಬಡಕುಂದ್ರಿಯ ಹೊಳೆಮ್ಮ ದೇವಸ್ಥಾನ, ಅಥಣಿಯ ಕೊಕಟನೂರ ಯಲ್ಲಮ್ಮ ದೇವಸ್ಥಾನ ಸೇರಿದಂತೆ ಒಟ್ಟು ಒಂಬತ್ತು ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸವದತ್ತಿ ಯಲ್ಲಮ್ಮನ ದೇವಸ್ಥಾನ ಕ್ಕೆ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಲಕ್ಷಾಂತರ ಭಕ್ತರು ಸಮಾವೇಶಗೊಳ್ಳುತ್ತಿದ್ದರು.ಈ ಜಾತ್ರೆಗೆ ಮಹಾರಾಷ್ಟ್ರ ರಾಜ್ಯದಿಂದಲೂ ಸಾವಿರಾರು ಜನರು ಬರುವ ಹಿನ್ನಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ಜಾತ್ರೆ ನಡೆಸುವದಕ್ಕೂ ನಿರ್ಬಂಧ ಹೇರಲಾಗಿದ್ದು ಜಿಲ್ಲೆಯ ಒಂಬತ್ತು ದೇವಸ್ಥಾನಗಳು ಮುಂದಿನ ಆದೇಶದವರೆಗೆ ಸಾರ್ವಜನಿಕರ ದರ್ಶನಕ್ಕೆ ಬಂದ್ ಆಗಲಿವೆ.

Advertisement

Udayavani is now on Telegram. Click here to join our channel and stay updated with the latest news.

Next