Advertisement

ಕ್ಷೇತ್ರ ಬಿಡಲ್ಲ; ಲೋಕಸಭೆಗೆ ನಿಲ್ಲಲ್ಲ: ಹೆಬ್ಬಾಳಕರ

04:30 PM Sep 29, 2018 | Team Udayavani |

ಬೆಳಗಾವಿ: ಲೋಕಸಭೆ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಎಂದಿಗೂ ಬಿಡುವುದಿಲ್ಲ. ಕೊನೆಯವರೆಗೂ ಕ್ಷೇತ್ರದಲ್ಲಿ ಮನೆಯ ಮಗಳಂತೆ ಸೇವೆ ಸಲ್ಲಿಸುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹೇಳಿದರು.

Advertisement

ನಗರದ ಕೆಪಿಟಿಸಿಎಲ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾಲ್ಕೂವರೆ ತಿಂಗಳ ಅಧಿಕಾರಾವಧಿಯಲ್ಲಿ ಅನೇಕ ನೀರಾವರಿ ಯೋಜನೆ, ಶಾಲೆಗಳ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಇತರ ಜನಪರ ಯೋಜನೆಗಳನ್ನು ಮಂಜೂರು ಮಾಡಿಸಿದ್ದೇನೆ. ಪ್ರತಿ ರವಿವಾರ, ಸೋಮವಾರ, ಮಂಗಳವಾರದಂದು ಬೆಂಗಳೂರಿನಲ್ಲಿ ಇದ್ದುಕೊಂಡೇ ಸಂಬಂಧಿಸಿದ ಸಚಿವರನ್ನು ಭೇಟಿಯಾಗಿ ಕ್ಷೇತ್ರಕ್ಕೆ ಬೇಕಾಗುವ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಿಸುತ್ತಿದ್ದು, ಬುಧವಾರ, ಗುರುವಾರ, ಶನಿವಾರ ಕ್ಷೇತ್ರದಲ್ಲಿ ಸುತ್ತಾಡುತ್ತೇನೆ. ಪ್ರತಿ ಗುರುವಾರ ವಿಜಯನಗರದಲ್ಲಿರುವ ಕಚೇರಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಜನತಾ ದರ್ಶನ ಮಾಡಿ ಕ್ಷೇತ್ರದ ಜನರ ಅಹವಾಲು ಆಲಿಸುತ್ತೇನೆ. ಅವರ ಕಷ್ಟ-ಸುಖಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಯತ್ನಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ನಾಯಕರ ಷಡ್ಯಂತ್ರ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರೈತರ ಸಾಲ ಮನ್ನಾ ಮಾಡುವುದರ ಜತೆಗೆ ಅನೇಕ ಜನಪರ ಯೋಜನೆಗಳನ್ನು ಜಾರಿ ತರಲಾಗಿದೆ. ಇದರಿಂದ ಹತಾಶರಾದ ಬಿಜೆಪಿ ನಾಯಕರು ಸರಕಾರದ ಹೆಸರು ಕೆಡಿಸುವ ಪ್ರಯತ್ನ ಮಾಡಿದರು. ಹೀಗಾಗಿ ನಾಲ್ಕು ತಿಂಗಳುಗಳ ಕಾಲ ರಾಜ್ಯದಲ್ಲಿ ಅಭಿವೃದ್ಧಿಗೆ ತೊಡಕಾಯಿತು. ಅದಕ್ಕೆ ಬಿಜೆಪಿ ನಾಯಕರ ಷಡ್ಯಂತ್ರವೇ ಮುಖ್ಯ ಕಾರಣ ಎಂದು ಹೆಬ್ಟಾಳ್ಕರ ಆರೋಪಿಸಿದರು. ಚುನಾವಣೆ ಬಳಿಕ ಜಿಲ್ಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಅನೇಕ ರಾಜಕೀಯ ಬೆಳವಣಿಗೆಗಳು ನಡೆದವು. ಅದೆಲ್ಲ ಕಹಿ ಘಟನೆ ಎಂದು ಮರೆತು ಬಿಡೋಣ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಕ್ಷೇತ್ರದ ಪ್ರಗತಿಗೆ ಎಲ್ಲ ಇಲಾಖೆಗಳಲ್ಲಿ ಅರ್ಜಿ ಸಲ್ಲಿಸಿದ್ದೇನೆ. ಖುದ್ದಾಗಿ ಇಲಾಖೆಯ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಹಲವಾರು ಯೋಜನೆಗಳು ಮಂಜೂರಾಗಿದ್ದು, ಹಂತ-ಹಂತವಾಗಿ ಭರವಸೆಗಳನ್ನು ಈಡೇರಿಸುತ್ತಿದ್ದೇನೆ ಎಂದರು. ಕಾಂಗ್ರೆಸ್‌ ಮುಖಂಡ ಯಲ್ಲಪ್ಪ ಡಕ್ಕೋಳಕರ ಮಾತನಾಡಿ, ಶಾಕಿ ಲಕ್ಷ್ಮೀ ಹೆಬ್ಟಾಳಕರ ಅವರು ಕ್ಷೇತ್ರದ ಮನೆಯ ಮಗಳು. ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸಿದ್ದಾರೆ. ಕ್ಷೇತ್ರದ ಜನರಿಗೆ ವೈಯಕ್ತಿಕವಾಗಿಯೇ ಅನೇಕ ಅನುಕೂಲಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಅವರು ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ್ದಾರೆ ಎಂದರು. ಕಾಂಗ್ರೆಸ್‌ ಮುಖಂಡರಾದ ಯುವರಾಜ ಕದಂ, ಸಿ.ಸಿ. ಪಾಟೀಲ, ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ ಸೇರಿದಂತೆ ಜಿಪಂ, ತಾಪಂ ಸದಸ್ಯರು, ಉಚಗಾವ ಹಾಗೂ ಬಾಗೇವಾಡಿ ಬ್ಲಾಕ್‌ ಕಾಂಗ್ರೆಸ್‌ನ ಪದಾಧಿಕಾರಿಗಳು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next