Advertisement

ಡಿ.10 ರಿಂದ ಬೆಳಗಾವಿ ಅಧಿವೇಶನ

06:30 AM Nov 15, 2018 | Team Udayavani |

ಬೆಂಗಳೂರು: ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ಡಿಸೆಂಬರ್‌ 10 ರಿಂದ 21 ರವರೆಗೆ ನಡೆಸುವ ಸಾಧ್ಯತೆಯಿದೆ.

Advertisement

ರಾಜ್ಯ ಸರ್ಕಾರ ಡಿಸೆಂಬರ್‌ 10 ರಿಂದ ಹತ್ತು ದಿನಗಳ ಕಾಲ ಅಧಿವೇಶನ ನಡೆಸುವ ಸಂಬಂಧ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದ್ದು ಒಪ್ಪಿಗೆ ದೊರೆತರೆ ಶುಕ್ರವಾದ ಸಂಪುಟ ಸಭೆಯ ಮುಂದಿಟ್ಟು ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಅಧಿವೇಶನದ ಸಿದ್ಧತೆ ಸಂಬಂಧ ನವೆಂಬರ್‌ 19 ರಂದು ವಿಧಾನಸಭೆ ಸ್ಪೀಕರ್‌ ರಮೇಶ್‌ಕುಮಾರ್‌ ಹಾಗೂ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.

ಈ ಹಿಂದಿನ ಅಧಿವೇಶನ ಸಂದರ್ಭದಲ್ಲಿ ಊಟ ಮತ್ತು ವಸತಿ ವಿಚಾರವಾಗಿ ಕೆಲವೊಂದು ಸಮಸ್ಯೆಗಳು ಉಂಟಾದ ಕಾರಣ ಊಟ/ವಸತಿ ಬಗ್ಗೆ ಈ ಬಾರಿ ವಿಶೇಷ ಆಸಕ್ತಿ ವಹಿಸಿ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗುವುದು ಎಂದು ಹೇಳಲಾಗಿದೆ.

ಸಂಪುಟ ವಿಸ್ತರಣೆ ಆಗುತ್ತಾ?
ಬೆಳಗಾವಿ ಅಧಿವೇಶನಕ್ಕೆ ಮುನ್ನ ನವೆಂಬರ್‌ ಅಂತ್ಯದೊಳಗೆ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆಯಾದರೂ ಮತ್ತೂಂದು ಮೂಲಗಳ ಪ್ರಕಾರ ಪಂಚ ರಾಜ್ಯಗಳ ಚುನಾವಣಾ ಫ‌ಲಿತಾಂಶದ ನಂತರ ಲೋಕಸಭೆ ಚುನಾವಣೆ ಕಾರ್ಯತಂತ್ರ ಬದಲಾವಣೆಯೊಂದಿಗೆ ಸಂಪುಟ ವಿಸ್ತರಣೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಹೀಗಾಗಿ, ಬೆಳಗಾವಿ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕವೇ ಸಂಪುಟ ವಿಸ್ತರಣೆಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ, ಆಕಾಂಕ್ಷಿಗಳಲ್ಲಿ ಮತ್ತೆ ಆತಂಕ ಶುರುವಾಗಿದೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next