Advertisement

ಹಿಂದುತ್ವದ ಅಲೆ ಸೃಷ್ಟಿಸಿದ ಛತ್ರಪತಿ ಶಿವಾಜಿ

01:45 PM Feb 20, 2020 | Naveen |

ಬೆಳಗಾವಿ: ಮೊಘಲರ ಕಾಲದಲ್ಲಿ ಇಡೀ ಜಗತ್ತಿನಲ್ಲಿಯೇ ಹಿಂದುತ್ವದ ಅಲೆಯನ್ನು ಸೃಷ್ಟಿಸಿದ ಮಹಾನ್‌ ಪುರುಷ ಛತ್ರಪತಿ ಶಿವಾಜಿ ಮಹಾರಾಜರು ಎಲ್ಲ ಸಮಾಜದವರನ್ನು ಒಟ್ಟಿಗೆ ಕರೆದುಕೊಂಡು ಹೋಗಿದ್ದರು. ಅವರ ಸಾಹಸಮಯ ಜೀವನ ಹಾಗೂ ಹೋರಾಟ ಇಂದಿಗೂ ಜನರ ನೆನಪಿನಲ್ಲಿ ಉಳಿದಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಛತ್ರಪತಿ ಶಿವಾಜಿ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಶಿವಾಜಿ ಅವರ ಸಾಹಸ, ಧೈರ್ಯ ಹಾಗೂ ಆದರ್ಶಮಯ ಜೀವನವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಆಶಾ ಐಹೊಳೆ, ಪೊಲೀಸ್‌ ಆಯುಕ್ತ ಬಿ.ಎಸ್‌. ಲೋಕೇಶಕುಮಾರ್‌, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಪಾಲಿಕೆ ಅಭಿಯಂತೆ ಲಕ್ಷ್ಮೀ  ನಿಪ್ಪಾಣಿಕರ್‌ ಮೊದಲಾದವರು ಉಪಸ್ಥಿತರಿದ್ದರು.

ಶಿವಾಜಿ ಉದ್ಯಾನವನದ ಸುತ್ತಲಿನ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಕ್ಕಳು ಶಿವಾಜಿಯ ವಿವಿಧ ವೇಷಭೂಷಣಗಳ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಸಾಂಬ್ರಾ: ಹಿಂದೂ ಸಾಮ್ರಾಜ್ಯವನ್ನು ರಕ್ಷಣೆ ಮಾಡುವಲ್ಲಿ ಹೋರಾಟ ಮಾಡಿದಂತ ಛತ್ರಪತಿ ಶಿವಾಜಿ ಮಹಾರಾಜರ ರಾಷ್ಟ್ರಪ್ರೇಮ ಯುವಕರಿಗೆ ಚೈತನ್ಯ ತುಂಬಲಿ ಎಂದು ಯುವ ಧುರೀಣ ವಿನಯ ಕದಮ ಹೇಳಿದರು. ಬೆಳಗಾವಿ ತಾಲೂಕಿನ ಮಣ್ಣುರ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಮರಾಠ ಸಮಾಜ ಬಾಂಧವರಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಹಮ್ಮಿಕೊಂಡ ಶಿವ ಜಯಂತಿ ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ನಂತರ ಮಣ್ಣುರು ಶಾಲೆಯ ಮಕ್ಕಳು ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ರಮೇಶ ಚೌಗುಲೆ, ಶುಭಂ ಪಾಟೀಲ, ರವಿ ಪಾಟೀಲ, ಆನಂದ ಗುರವ ಸೇರಿದಂತೆ ಯುವಕರು, ಗ್ರಾಮಸ್ಥರು ಭಾಗವಹಿಸಿದ್ದರು.

Advertisement

ಶಿವಾಜಿ ಆದರ್ಶ ಅಳವಡಿಸಿಕೊಳ್ಳಲು ಸಲಹೆ ಕೋಹಳ್ಳಿ: ಶಿವಾಜಿ ಮಹಾರಾಜರ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಪಂ ಸದಸ್ಯ ಸದಾಶಿವ ಹರಪಾಳೆ ಹೇಳಿದರು.

ಸ್ಥಳೀಯ ಛತ್ರಪತಿ ಶಿವಾಜಿ ಯುವಕ ಮಂಡಳ ಆಶ್ರಯದಲ್ಲಿ ಶಿವಾಜಿ ಸರ್ಕಲ್‌ದಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ಇದಕ್ಕೂ ಮೊದಲು ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಶಂಕರಯ್ನಾ ಹಿರೇಮಠ ಪೂಜೆ ಸಲ್ಲಿಸಿದರು. ಸ್ಥಳೀಯ ಗ್ರಾಪಂ ಕಾರ್ಯಾಲಯದಲ್ಲಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಭೀಮಯ್ಯ ಪೂಜಾರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಗಣಪತಿ ನಾಗಣಿ, ಅಶೋಕ ಕೊಡಗ, ನೂರಹ್ಮದ್‌ ಡೊಂಗರಗಾಂವ, ಚಿದಾನಂದ ತಳಕೇರಿ, ಸುರೇಶ ಅವತಾಡೆ, ರಮೇಶ ಉಮರಾಣಿ, ಸಂಗಪ್ಪ ಡಂಬಳಿ, ಮೈಬೂಬ ಪಡಸಲಗಿ, ಸಹದೇವ ಸೂರ್ಯವಂಶಿ, ತುಕಾರಾಮ ಪಢತಾರೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next